ಉಪ್ಪಳ: ಪೈವಳಿಕೆನಗರ ಸರ್ಕಾರಿ ಹಯರ್ ಸೆಕೆಂಡರಿ ಶಾಲೆಯಲ್ಲಿ ಗಣರಾಜ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಪ್ರಾಂಶುಪಾಲ ದಿವಾಕರನ್ ಕೆ ಧ್ವಜಾರೋಹಣ ನೆರವೇರಿಸಿದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಇಬ್ರಾಹಿಂ ಪಾವಲ್ಕೋಡಿ ಮುಖ್ಯ ಅತಿಥಿಯಾಗಿದ್ದರು. ಶಾಲಾ ಮುಖ್ಯೋಪಾಧ್ಯಾಯ ಇಬ್ರಾಹಿಂ ಬಿ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಶಿಕ್ಷಕ ರವೀಂದ್ರನಾಥ್ ಕೆ ಆರ್ ಕಾರ್ಯಕ್ರಮ ನಿರೂಪಿಸಿದರು.





