HEALTH TIPS

ಒಡಿಯೂರು ಶ್ರೀ ಷಷ್ಠ್ಯಬ್ದ : ಸರಣಿ ಕಾರ್ಯಕ್ರಮದ ಉದ್ಘಾಟನೆ-ಮಧೂರಿನಲ್ಲಿ ನಾಟಿ ಉತ್ಸವ

         ಮಧೂರು: ಪರಮಪೂಜ್ಯ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಗಳವರ ಷಷ್ಠ್ಯಬ್ದ ಸಂಭ್ರಮ - 2021 ಜ್ಞಾನವಾಹಿನಿ ಕಾರ್ಯಕ್ರಮದ ಕಾಸರಗೋಡು ವಲಯ ಸಮಿತಿ ಮತ್ತು ಸರಣಿ ಕಾರ್ಯಕ್ರಮದ ಉದ್ಘಾಟನೆ ಶುಕ್ರವಾರ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನ ಸಭಾ ಮಂಟಪದಲ್ಲಿ ನಡೆಯಿತು.  

       ಕಾರ್ಯಕ್ರಮಕ್ಕೆ ಮುನ್ನ ಸ್ವಾಮೀಜಿಗಳವರಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು. ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದಂಗಳವರು ದೀಪ ಪ್ರಜ್ವಲನೆಗೈದು ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಲಯ ಸಮಿತಿ ಮತ್ತು ಸರಣಿ ಕಾರ್ಯಕ್ರಮದ ಉದ್ಘಾಟನೆಯನ್ನು ಒಡಿಯೂರು ಶ್ರೀ ಕ್ಷೇತ್ರದ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ನೆರವೇರಿಸಿ ಆಶೀರ್ವಚನವಿತ್ತರು. ಪರಮಪೂಜ್ಯ ಸಾದ್ವಿ ಶ್ರೀ ಮಾತಾನಂದಮಯಿ, ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಆಸ್ರ ಆಶೀರ್ವಚನವಿತ್ತರು. ಕಾಸರಗೋಡು ವಲಯ ಸಮಿತಿ ಅಧ್ಯಕ್ಷ ಕೆ.ಎನ್.ವೆಂಕಟ್ರಮಣ ಹೊಳ್ಳ ಅಧ್ಯಕ್ಷತೆ ವಹಿಸಿದರು.  ಒಡಿಯೂರು ಕೇಂದ್ರ ಸಮಿತಿ ಕೋಶಾಧಿಕಾರಿ ಸುರೇಶ್ ರೈ ಮುಖ್ಯ ಅತಿಥಿಯಾಗಿ ಭಾಗವಹಿಸಿದರು.  

       ಅತಿಥಿಗಳಾಗಿ ಮಧೂರು ಗ್ರಾಮ ಪಂಚಾಯತ್ ಅಧ್ಯಕ್ಷ ಗೋಪಾಲಕೃಷ್ಣ, ಮಧೂರು ದೇವಸ್ಥಾನದ ಕಾರ್ಯನಿರ್ವಹಣಾ„ಕಾರಿ ಎಂ.ಬಾಬು, ಮಧೂರು ಶ್ರೀ ಕ್ಷೇತ್ರದ ಮುಖ್ಯ ಅರ್ಚಕ ಶ್ರೀಕೃಷ್ಣ ಉಪಾಧ್ಯಾಯ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಸರಗೋಡು ಯೋಜನಾಧಿಕಾರಿ ಚೇತನಾ ಎಂ, ಮಧೂರು ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಜಯದೇವ ಖಂಡಿಗೆ, ಕಾಸರಗೋಡು ವಲಯ ಮಹಿಳಾ ಸಮಿತಿ ಅಧ್ಯಕ್ಷೆ ಶ್ರೀಲತಾ ಎಂ, ಕ್ಷೇತ್ರ ಸಂರಕ್ಷಣಾ ಸಮಿತಿ ರಾಜ್ಯ ಕಾರ್ಯದರ್ಶಿ ಎಂ.ಅಪ್ಪಯ್ಯ ನಾಯ್ಕ್ ಮಧೂರು ಉಪಸ್ಥಿತರಿದ್ದರು. 

        ಕಾರ್ಯಕ್ರಮದಲ್ಲಿ ಪ್ರಧಾನ ಕಾರ್ಯದರ್ಶಿ ಶಿವರಾಮ ಕಾಸರಗೋಡು ಸ್ವಾಗತಿಸಿದರು. ಕಾರ್ಯಾಧ್ಯಕ್ಷ ಜಯಾನಂದ ಕುಮಾರ್ ಹೊಸದುರ್ಗ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘಟನಾ ಕಾರ್ಯದರ್ಶಿ ಕೆ.ಜಗದೀಶ್ ಕೂಡ್ಲು, ಶಂಕರ್ ಕೆ.  ಕಾರ್ಯಕ್ರಮ ನಿರೂಪಿಸಿದರು. ಸಂಘಟನಾ ಕಾರ್ಯದರ್ಶಿ ಕೆ.ಗುರುಪ್ರಸಾದ್ ಕೋಟೆಕಣಿ ವಂದಿಸಿದರು. 

            ಇದೇ ಸಂದರ್ಭದಲ್ಲಿ ಮಧೂರು ದೇವಸ್ಥಾನದ ಗದ್ದೆಯಲ್ಲಿ ನಾಟಿ ಉತ್ಸವ ಜರಗಿತು. ಒಡಿಯೂರು ಶ್ರೀ ಅವರು ನಾಟಿ ಮಾಡುವ ಮೂಲಕ ನಾಟಿ ಉತ್ಸವಕ್ಕೆ ಚಾಲನೆ ನೀಡಿದರು. ಯತಿವರ್ಯರಿಗೆ ಮಧೂರು ದೇವಸ್ಥಾನದ ವತಿಯಿಂದ ಭವ್ಯ ಸ್ವಾಗತ ನೀಡಲಾಯಿತು. 


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries