HEALTH TIPS

ಅಮೆರಿಕ: ಶಾಂತಿಯುತವಾಗಿ ‌ಅಧಿಕಾರ ಹಸ್ತಾಂತರ ಅಗತ್ಯ -ಮೋದಿ

          ನವದೆಹಲಿ: ಕಾನೂನುಬಾಹಿರವಾಗಿ ಪ್ರತಿಭಟನೆಗಳನ್ನು ನಡೆಸುವುದರಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಪ್ರಕ್ರಿಯೆಗಳಿಗೆ ತಡೆಯೊಡ್ಡಲಾಗದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

        ವಾಷಿಂಗ್ಟನ್ ಡಿ.ಸಿ ಬಳಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರ ಬೆಂಬಲಿಗರು ನಡೆಸಿದ ಹಿಂಸಾಚಾರವನ್ನು ಉಲ್ಲೇಖಿಸಿ ಅವರು ಈ ಮಾತು ಹೇಳಿದ್ದಾರೆ.

‌           ನಿಯಮಾನುಸಾರ ಮತ್ತು ಶಾಂತಿಯುತವಾಗಿ ಅಧಿಕಾರ ಹಸ್ತಾಂತರ ಪ್ರಕ್ರಿಯೆ ನಡೆಯಬೇಕಾಗಿದೆ ಎಂದು ಈ ಕುರಿತು ಮಾಡಿದ ಟ್ವೀಟ್‌ನಲ್ಲಿ ಅವರು ಅಭಿಪ್ರಾಯಪಟ್ಟಿದ್ದಾರೆ.

          ವಾಷಿಂಗ್ಟನ್‌ ಡಿ.ಸಿಯಲ್ಲಿ ನಡೆದ ಹಿಂಸಾಚಾರ ಮತ್ತು ಗದ್ದಲವನ್ನು ಗಮನಿಸಿದರೆ ಬೇಸರವಾಗುತ್ತದೆ. ಇಂಥ ಕ್ರಮಗಳಿಂದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹತ್ತಿಕ್ಕಲಾಗದು ಎಂದು ಅವರು ಹೇಳಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries