ಕಾಸರಗೋಡು: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಗಳವರ ಷಷ್ಟ್ಯಬ್ದ ಸಂಭ್ರಮವನ್ನು ಯಶಸ್ವಿಗೊಳಿಸುವ ಉದ್ದೇಶದಿಂದ ಕಾಸರಗೋಡು ವಲಯ ಸಮಿತಿ ಸಭೆ ಕಾಸರಗೋಡು ಪೇಟೆ ಶ್ರೀ ವೆಂಕಟ್ರಮಣ ದೇವಸ್ಥಾನದ ವ್ಯಾಸ ಮಂಟಪದಲ್ಲಿ ಜರಗಿತು.
ಕಾಸರಗೋಡು ವಲಯ ಸಮಿತಿ ಅಧ್ಯಕ್ಷ ಕೆ.ಎನ್.ವೆಂಕಟ್ರಮಣ ಹೊಳ್ಳ ಅಧ್ಯಕ್ಷತೆ ವಹಿಸಿದ್ದರು. ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಆಸ್ರ ಅವರು ಆಶೀರ್ವಚನ ನೀಡಿದರು. ಸಭೆಯಲ್ಲಿ ಒಡಿಯೂರು ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಯಶವಂತ ವಿಟ್ಲ ಅವರು ಷಷ್ಟ್ಯಬ್ದ ಕಾರ್ಯಕ್ರಮದ ಸಮಗ್ರ ಮಾಹಿತಿ ನೀಡಿದರು. ಹಿರಿಯ ಪತ್ರಕರ್ತ, ಲೇಖಕ ಮಲಾರ್ ಜಯರಾಮ ರೈ ಒಡಿಯೂರು ಕ್ಷೇತ್ರದ ಮಹಿಮೆಯನ್ನು ವಿವರಿಸಿದರು. ಸಭೆಯಲ್ಲಿ ಹರಿದಾಸ ಜಯಾನಂದ ಕುಮಾರ್ ಹೊಸದುರ್ಗ, ಕಾಸರಗೋಡು ನಗರಸಭಾ ಮಾಜಿ ಸದಸ್ಯ ಶಂಕರ ಕೆ, ಕಾಸರಗೋಡು ನಗರಸಭೆಯ ಕೌನ್ಸಿಲರ್‍ಗಳಾದ ವರಪ್ರಸಾದ್ ಕೋಟೆಕಣಿ, ಶ್ರೀಲತಾ, ಅಶ್ವಿನಿ ನಾೈಕ್ ಶುಭಹಾರೈಸಿದರು.
ಕಾಸರಗೋಡು ವಲಯ ಸಮಿತಿ ಪ್ರಧಾನ ಕಾರ್ಯದರ್ಶಿ ಶಿವರಾಮ ಕಾಸರಗೋಡು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಗುರುಪ್ರಸಾದ್ ಕೋಟೆಕಣಿ ವಂದಿಸಿದರು.





