HEALTH TIPS

Covid-19 India Update: 98 ಲಕ್ಷಕ್ಕೂ ಹೆಚ್ಚು ಕೋವಿಡ್-19 ಸೋಂಕಿತರು ಚೇತರಿಕೆ

             ನವದೆಹಲಿ: ದೇಶದಾದ್ಯಂತ ಈವರೆಗೆ 98,83,461 ಮಂದಿ ಕೊರೊನಾ ವೈರಸ್‌ ಸೋಂಕಿತರು ಗುಣಮುಖರಾಗಿದ್ದಾರೆ. 24 ಗಂಟೆ ಅವಧಿಯಲ್ಲಿ 23,181 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

        ಹೊಸದಾಗಿ 20,036 ಪ್ರಕರಣಗಳು ದೃಢಪಟ್ಟಿದ್ದು, 256 ಸೋಂಕಿತರು ಅಸುನೀಗಿದ್ದಾರೆ. ಇದರೊಂದಿಗೆ, ಈವರೆಗೆ ಸೋಂಕು ತಗುಲಿದವರ ಒಟ್ಟು ಸಂಖ್ಯೆ 1,02,86,710 ಆಗಿದೆ. ಮೃತಪಟ್ಟವರ ಸಂಖ್ಯೆ 1,48,994ಕ್ಕೆ ಏರಿಕೆಯಾಗಿದೆ.

        ಡಿಸೆಂಬರ್ 31ರ ವರೆಗೆ ದೇಶದಾದ್ಯಂತ 17.31 ಕೋಟಿಗೂ ಹೆಚ್ಚು ಕೊರೊನಾ ಪರೀಕ್ಷೆ ನಡೆಸಲಾಗಿದೆ. ಗುರುವಾರ 10,62,420 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries