ಬದಿಯಡ್ಕ: ಗೋಸಾಡ ಶ್ರೀ ಮಹಿಷಮರ್ದಿನೀ ದೇವಸ್ಥಾನದ ಪ್ರತಿಷ್ಠಾ ದಿನ ಮಹೋತ್ಸವವು ಫೆ.11 ಹಾಗೂ 12ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಫೆ.11ರಂದು ರಾತ್ರಿ 8ಕ್ಕೆ ದುರ್ಗಾ ಹೋಮ ಮತ್ತು ಕಾರ್ತಿಕ ಪೂಜೆ ನಡೆಯಲಿದೆ. ಫೆ.12ರಂದು ಬೆಳಗ್ಗೆ ಚಂಡಿಕಾ ಹೋಮ, ಬಲಿವಾಡು ಕೂಟ ನಡೆಯಲಿದೆ. ಅಂದು ಅಪರಾಹ್ನ 3 ಗಂಟೆಗೆ ಬ್ರಹ್ಮಕಲಶೋತ್ಸವ ಸಮಿತಿಯಲ್ಲಿ ಸೇವೆ ಸಲ್ಲಿಸಿದ ಕಾರ್ಯಕರ್ತರಿಗೆ ಅಭಿನಂದನಾ ಸಭೆ ನಡೆಯಲಿದೆ. ಎಲ್ಲಾ ಕಾರ್ಯಕ್ರಮಗಳನ್ನು ಸರಕಾರದ ಕೋವಿಡ್ ಮಾನದಂಡಗಳನ್ನು ಪಾಲಿಸಿಕೊಂಡು ನಡೆಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.




