ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12,923 ಹೊಸ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,08,71,294ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಒಂದೇ ದಿನ ಮಹಾಮಾರಿ ವೈರಸ್ 108 ಮಂದಿಯನ್ನು ಬಲಿಪಡೆದುಕೊಂಡಿದ್ದು, ಸಾವಿನ ಸಂಖ್ಯೆ 1,55,360ಕ್ಕೆ ಏರಿಕೆಯಾಗಿದೆ.
ಈ ನಡುವೆ ಒಟ್ಟಾರೆ 1,08,71,294ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 11,764 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 1,05,73,372ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 1,42,562 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.
ಭಾರತದಲ್ಲಿ ಒಂದೇ ದಿನ 6,99,185 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 20,40,23,840 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ.
ಇದರಂತೆ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ, 70,17,114 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.