HEALTH TIPS

ಕೋವಿಡ್-19: ಒಂದೇ ದಿನ 14,199 ಹೊಸ ಪ್ರಕರಣ, ಹಲವು ರಾಜ್ಯಗಳಲ್ಲಿ ಸೋಂಕಿತರ ಸಂಖ್ಯೆ ದ್ವಿಗುಣ

           ನವದೆಹಲಿ: ದೇಶದಲ್ಲಿ ಕೋವಿಡ್ 2ನೇ ಅಲೆ ಭೀತಿ ಆರಂಭವಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,10, 05,850ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 14,199 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಸಕ್ರೀಯ ಪ್ರಕರಣಗಳ ಸಂಖ್ಯೆ ಕೂಡ 1,50,055ಕ್ಕೆ ಹೆಚ್ಚಳವಾಗಿದೆ.


        ಕಳೆದ 5 ದಿನಕ್ಕೆ ಹೋಲಿಸಿದರೆ ಭಾನುವಾರ ಒಂದೇ ದಿನ (ಫೆ.21) ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

          ವರದಿಗಳ ಪ್ರಕಾರ 22 ರಾಜ್ಯಗಳಲ್ಲಿ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಶನಿವಾರ (ಫೆ.20) ಯಾವುದೇ ಕೋವಿಡ್ ಸಂಬಂಧಿತ ಸಾವು ಕಂಡುಬಂದಿಲ್ಲ. ಕೇರಳ ಮತ್ತು ಮಹಾರಾಷ್ಟ್ರದಲ್ಲೇ ಅತೀ ಹೆಚ್ಚು ಪ್ರಮಾಣದಲ್ಲಿ (72%) ಸಕ್ರೀಯ ಪ್ರಕರಣಗಳಿವೆ.

           ಕಳೆದ 24 ಗಂಟೆಗಳಲ್ಲಿ 14,199 ಹೊಸ ಪ್ರಕರಣ ಕಂಡುಬಂದರೆ, 9,695 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 83 ಮಂದಿ ಕೋವಿಡ್ ವೈರಸ್ ಕಾರಣದಿಂದ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,10, 05,850ಕ್ಕೆ ಏರಿಕೆಯಾಗಿದೆ. ಒಟ್ಟು 1,06,99,410 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಮೃತರ ಸಂಖ್ಯೆ 1,56,385. ಸದ್ಯ ದೇಶದಲ್ಲಿರುವ ಸಕ್ರಿಯ ಪ್ರಕರಣಗಳ ಸಂಖ್ಯೆ 1,50,055.

          ಮಹಾರಾಷ್ಟ್ರ, ಕೇರಳ ಮಾತ್ರವಲ್ಲದೆ ಮಧ್ಯಪ್ರದೇಶ, ಚತ್ತಿಸ್ ಗಡದಲ್ಲೂ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಪಂಜಾಬ್ ಮತ್ತು ಜಮ್ಮಕಾಶ್ಮೀರದಲ್ಲೂ ಹೊಸ ಪ್ರಕರಣಗಳ ಸಂಖ್ಯೆ ದ್ವಿಗುಣಗೊಂಡಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries