HEALTH TIPS

ಕೋವಿಡ್-19: ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 16,738 ಹೊಸ ಕೇಸು ಪತ್ತೆ, 138 ಮಂದಿ ಸಾವು

         ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 16,738 ಹೊಸ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,10,46,914kಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.


        ಒಂದೇ ದಿನ ಮಹಾಮಾರಿ ವೈರಸ್ 138 ಮಂದಿಯನ್ನು ಬಲಿಪಡೆದುಕೊಂಡಿದ್ದು, ಸಾವಿನ ಸಂಖ್ಯೆ 1,56,705ಕ್ಕೆ ಏರಿಕೆಯಾಗಿದೆ.

       ಈ ನಡುವೆ ಒಟ್ಟಾರೆ 1,10,46,914 ಮಂದಿ ಸೋಂಕಿತರ ಪೈಕಿ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 1,07,38,501ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 1,51,708 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.

      ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ.

      ಇದುವರೆಗೆ ಕೋವಿಡ್-19ಗೆ 21,38,29,658 ಸ್ಯಾಂಪಲ್ ಗಳನ್ನು ಪರೀಕ್ಷೆಗೊಳಪಡಿಸಲಾಗಿದ್ದು ಅವುಗಳ ಪೈಕಿ 7,93,383 ಸ್ಯಾಂಪಲ್ ಗಳು ನಿನ್ನೆ ಒಂದೇ ದಿನ ಪರೀಕ್ಷೆಗೊಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ(ಐಸಿಎಂಆರ್) ತಿಳಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries