ನವದೆಹಲಿ: ಮಾರ್ಚ್ 31ರವರೆಗೆ ಅಂತರಾಷ್ಟ್ರೀಯ ವಾಣಿಜ್ಯ ವಿಮಾನಗಳ ಹಾರಾಟಕ್ಕೆ ನಿಷೇಧ ವಿಸ್ತರಿಸಲಾಗಿದೆ
ಈ ಬಗ್ಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಮಾಹಿತಿ ನೀಡಿದ್ದು ಆಯ್ದ ದೇಶಗಳೊಂದಿಗೆ ದ್ವಿಪಕ್ಷೀಯ ಏರ್ ಬಬಲ್ ಒಪ್ಪಂದಗಳಡಿಯಲ್ಲಿ ಸಮರ್ಪಿತ ಕಾರ್ಗೋ ವಿಮಾನಗಳು ಹಾಗೂ ವಿಮಾನಗಳು ಕಾರ್ಯನಿರ್ವಹಿಸುವುದನ್ನು ಮುಂದುವರಿಸಲಾಗುವುದು ಎಂದು ಹೇಳಿದೆ.
ದೇಶದಲ್ಲಿ ಕೋವಿಡ್ -19 ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಕಳೆದ ಮಾರ್ಚ್ 23 ರಿಂದ ನಿಗದಿತ ಅಂತರಾಷ್ಟ್ರೀಯ ವಿಮಾನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ.
ಅಮಾನತು ನಡುವೆ ಕಳೆದ ವರ್ಷ ಮೇ ತಿಂಗಳಿನಿಂದ ವಂದೇ ಭಾರತ್ ಮಿಷನ್ ಅಡಿಯಲ್ಲಿ ಮತ್ತು ಜುಲೈನಿಂದ ಆಯ್ದ ದೇಶಗಳೊಂದಿಗೆ ದ್ವಿಪಕ್ಷೀಯ 'ಏರ್ ಬಬಲ್' ವ್ಯವಸ್ಥೆಗಳ ಅಡಿಯಲ್ಲಿ ವಿಶೇಷ ಅಂತರಾಷ್ಟ್ರೀಯ ವಿಮಾನಯಾನಗಳನ್ನು ಅನುಮತಿಸಲಾಗಿದೆ.
ಭಾರತವು ಯುನೈಟೆಡ್ ಸ್ಟೇಟ್ಸ್, ಯುನೈಟೆಡ್ ಕಿಂಗ್‌ಡಮ್, ಯುನೈಟೆಡ್ ಅರಬ್ ಎಮಿರೇಟ್ಸ್, ಕೀನ್ಯಾ, ಭೂತಾನ್ ಮತ್ತು ಫ್ರಾನ್ಸ್ ಸೇರಿದಂತೆ ಹಲವಾರು ದೇಶಗಳೊಂದಿಗೆ ಏರ್ ಬಬಲ್ ಒಪ್ಪಂದಗಳನ್ನು ರೂಪಿಸಿದೆ. ಎರಡು ದೇಶಗಳ ನಡುವಿನಏರ್ ಬಬಲ್ ಒಪ್ಪಂದದಡಿಯಲ್ಲಿ, ವಿಶೇಷ ಅಂತರಾಷ್ಟ್ರೀಯ ವಿಮಾನಗಳನ್ನು ತಮ್ಮ ವಿಮಾನಯಾನ ಸಂಸ್ಥೆಗಳು ಪ್ರಾಂತ್ಯಗಳ ನಡುವೆ ನಿರ್ವಹಿಸಬಹುದು.



