ಕಾಸರಗೋಡು: ಸಾರ್ವಜನಿಕ ಶಿಕ್ಷಣ ಸಂರಕ್ಷಣಾ ಯಜ್ಷ ಕಾರ್ಯಕ್ರಮ ಅಂಗವಾಗಿ ಕಾಸರಗೋಡು ಜಿಲ್ಲೆಯ 8ಶಿಕ್ಷಣಾಲಯಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೇರಿಸಲಾಗಿದೆ. 'ಕಿಫ್‍ಬಿ' ಹಾಗೂ ಯೋಜನಾ ನಿಧಿ ಬಳಸಿ ಕಟ್ಟಡಗಳನ್ನು ನಿರ್ಮಿಸಲಾಗಿದ್ದು, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆನ್ ಲೈನ್ ಮೂಲಕ ಉದ್ಘಾಟಿಸಿದರು.
ಮೊಗ್ರಾಲ್ ಸರ್ಕಾರಿ ಪೊಕೇಶನಲ್ ಹೈಯರ್ ಸೆಕೆಂಡರಿ ಶಾಲೆ, ತಳಂಗರೆ ಸರ್ಕಾರಿ ಪೊಕೇಶನಲ್ ಹೈಯರ್ ಸೆಕೆಂಡರಿ ಶಾಲೆ, ಚೆಮ್ನಾಡ್ ಹೈಯರ್ ಸೆಕೆಂಡರಿ ಶಾಲೆ, ಪಿಲಿಕೋಡ್ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆ, ವೆಳ್ಳಿಕೋತ್ ಸರ್ಕಾರಿ ಪೊಕೇಶನಲ್ ಹೈಯರ್ ಸೆಕೆಂಡರಿ ಶಾಲೆ, ಚಾಯೋತ್ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆ, ಬಳಾಂತೋಡು ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆ ಗಳ ಕಟ್ಟಡಗಳ ಉದ್ಘಾಟನೆ ನಡೆಯಿತು.
ಸಾರ್ವಜನಿಕ ಶಿಕ್ಷಣ ಸಚಿವ ಸಿ.ರವೀಂದ್ರ ನಾಥ್ ಅಧ್ಯಕ್ಷತೆ ವಹಿಸಿದ್ದರು. ಹಣಕಾಸು ಸಚಿವ ಡಾ.ಥಾಮಸ್ ಐಸಾಕ್ ಪ್ರಧಾನ ಭಾಷಣ ಮಾಡಿದರು. ಕಂದಾಯ ಸಚಿವ ಇ.ಚಂದ್ರಶೇಖರನ್, ಸಂಸದ ಪಿ.ರಾಜ್ ಮೋಹನ್ ಉಣ್ಣಿತ್ತಾನ್ ಮುಖ್ಯಅತಿಥಿಗಳಾಗಿದ್ದರು. ಪ್ರತಿ ಶಾಲಾ ಮಟ್ಟದಲ್ಲಿ ಪ್ರತ್ಯೇಕ ಸಮಾರಂಭಗಳನ್ನು ಆಯೋಜಿಸಲಾಗಿತ್ತು.
ಚಿತ್ರ ಮಾಹಿತಿ: ತಳಂಗರೆ ಸರ್ಕಾರಿ ವೊಕೇಶನಲ್ ಹೈಯರ್ ಸೆಕೆಂಡರಿ ಶಾಲೆಯ ನೂತನ ಕಟ್ಟಡವನ್ನು ಶಾಸಕ ಎನ್.ಎ ನೆಲ್ಲಿಕುನ್ನು ಉದ್ಘಾಟಿಸಿದರು.





