HEALTH TIPS

ತಮಿಳುನಾಡು: ಪರೀಕ್ಷೆ ಇಲ್ಲದೆ 9, 10, 11ನೇ ತರಗತಿ ವಿದ್ಯಾರ್ಥಿಗಳು ಪಾಸ್, ಸರ್ಕಾರಿ ನೌಕರರ ನಿವೃತ್ತಿ ವಯಸ್ಸು 60ಕ್ಕೆ ಏರಿಕೆ!

        ಚೆನ್ನೈ: ತಮಿಳುನಾಡು ಸರ್ಕಾರ 2020-21ನೇ ಸಾಲಿನ 9, 10 ಮತ್ತು 11 ನೇ ತರಗತಿಯ ವಿದ್ಯಾರ್ಥಿಗಳನ್ನು  ಪರೀಕ್ಷೆಯಿಲ್ಲದೆ ಮುಂದಿನ ತರಗತಿಗೆ ತೇರ್ಗಡೆ ಮಾಡಿದ್ದು, ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 60 ವರ್ಷಕ್ಕೆ ಹೆಚ್ಚಿಸಿದೆ.


       2020-21ನೇ ಸಾಲಿನ 9, 10 ಮತ್ತು 11 ನೇ ತರಗತಿಯ ವಿದ್ಯಾರ್ಥಿಗಳನ್ನು ಪರೀಕ್ಷೆಯಿಲ್ಲದೆ ಪಾಸ್ ಮಾಡಲಾಗಿದ್ದು, ಇದರ ಅನುಷ್ಠಾನದ ಬಗ್ಗೆ ವಿವರವಾದ ಮಾರ್ಗಸೂಚಿಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಚ್ಚಾಮಿ ಗುರುವಾರ ಹೇಳಿದ್ದಾರೆ.

         ಇಂದು ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಪಳನಿಚ್ಚಾಮಿ ಅವರು, ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ಈಗಿರುವ 59 ವರ್ಷದಿಂದ 60 ವರ್ಷಕ್ಕೆ ಹೆಚ್ಚಿಸಲಾಗುವುದು ಎಂದು ಘೋಷಿಸಿದರು.

       ಹೊಂದುತ್ತಿರುವ ಎಲ್ಲಾ ನೌಕರರಿಗೂ ಹೊಸ ನಿವೃತ್ತಿ ವಯಸ್ಸು ಅನ್ವಯಿಸುತ್ತದೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

      ರಾಜ್ಯ ಸರ್ಕಾರ ಕಳೆದ ಜನವರಿಯಲ್ಲಿ 10 ಮತ್ತು 12 ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆಗಳನ್ನು ಪುನರಾರಂಭಿಸಿತ್ತು ಮತ್ತು ಇತ್ತೀಚೆಗೆ ಪಬ್ಲಿಕ್ ಪರೀಕ್ಷೆಗಳ ವೇಳಾಪಟ್ಟಿಯನ್ನು ಪ್ರಕಟಿಸಿತು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries