HEALTH TIPS

ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣ-ಎಂ ಶಿವಶಂಕರ್ ಅವರ ಜಾಮೀನು ರದ್ದುಪಡಿಸುವಂತೆ ಸುಪ್ರೀಂ ಕೋರ್ಟ್ ಗೆ ಜಾರಿ ನಿರ್ದೇಶನಾಲದಿಂದ ಅರ್ಜಿ

                                

           ಕೊಚ್ಚಿ: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಎಂ.ಶಿವಶಂಕರ್‍ಗೆ ನೀಡಿದ್ದ ಜಾಮೀನು ರದ್ದುಗೊಳಿಸುವಂತೆ ಒತ್ತಾಯಿಸಿ ಜಾರಿ ನಿರ್ದೇಶನಾಲಯ ಸುಪ್ರೀಂ ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿದೆ.


 

     ಎಂ.ಶಿವಶಂಕರ್ ಜಾಮೀನಿನ ಮೇಲೆ ಬಿಡುಗಡೆಯಾಗಿರುವುದು ತನಿಖೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಜಾರಿ ನಿರ್ದೇಶನಾಲಯವು ಸುಪ್ರೀಂ ಕೋರ್ಟ್‍ನಲ್ಲಿ ಸಲ್ಲಿಸಿದ್ದ ಅರ್ಜಿಯಲ್ಲಿ ತಿಳಿಸಿದೆ. ಈವರೆಗೆ ನಡೆದ ತನಿಖೆಯಲ್ಲಿ ಶಿವಶಂಕರ್ ವಿರುದ್ಧ ಬಲವಾದ ಪುರಾವೆಗಳಿವೆ ಎಂದು ಜಾರಿ ನಿರ್ದೇಶನಾಲಯವು ಅರ್ಜಿಯಲ್ಲಿ ತಿಳಿಸಿದೆ.

        ಕಸ್ಟಮ್ಸ್ ಮತ್ತು ಇಡಿ ದಾಖಲಿಸಿದ ಮೂರು ಪ್ರಕರಣಗಳಲ್ಲಿ ಜಾಮೀನು ಪಡೆದ ನಂತರ ಶಿವಶಂಕರ್ ಅವರನ್ನು ಮಾರ್ಚ್ 3 ರಂದು ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. 

        ಶಿವಶಂಕರ್ ಅವರ ಜಾಮೀನು ರದ್ದುಗೊಳಿಸುವಂತೆ ಕೋರಿ ಜಾರಿ ನಿರ್ದೇಶನಾಲಯದ ಕೊಚ್ಚಿ ವಲಯ ಕಚೇರಿಯ ಸಹಾಯಕ ನಿರ್ದೇಶಕರು ಸುಪ್ರೀಂ ಕೋರ್ಟ್ ನ್ನು ಸಂಪರ್ಕಿಸಿದ್ದಾರೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries