HEALTH TIPS

ಕೇರಳದಲ್ಲೂ ಲವ್​ ಜಿಹಾದ್​ ವಿರುದ್ಧ ಕಾನೂನು; ಬಿಜೆಪಿ ಭರವಸೆ!

             ತಿರುವನಂತಪುರ: ಉತ್ತರ ಪ್ರದೇಶದ ಯೋಗಿ ಆದಿತ್ಯಾನಾಥ ಸರ್ಕಾರವು ಲವ್​ ಜಿಹಾದ್​ ವಿರುದ್ಧ ಕಾನೂನು ತಂದ ಬೆನ್ನಲ್ಲೇ ಇದೀಗ ಕೇರಳದಲ್ಲೂ ಇಂತದ್ದೊಂದು ಕಾನೂನನ್ನು ತರುವುದಾಗಿ ಬಿಜೆಪಿ ಹೇಳಿದೆ. ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಗೆದ್ದರೆ ಲವ್​ ಜಿಹಾದ್​ ವಿರುದ್ಧ ಕಾನೂನು ತರುವುದಾಗಿ ಪಕ್ಷ ಹೇಳಿಕೊಂಡಿದೆ.

         ಲವ್​ ಜಿಹಾದ್​ ದೇಶಾದ್ಯಂತ ಚರ್ಚೆಯಾಗುತ್ತಿರುವ ವಿಷಯವಾಗಿದೆ. ಕೇರಳದಲ್ಲೂ ಈ ರೀತಿಯ ಅಕ್ರಮವನ್ನು ತಡೆಯಬೇಕು ಎನ್ನುವ ಕೂಗಿದೆ. ಕೇವಲ ಹಿಂದೂ ಸಂಘಟನೆಗಳು ಮಾತ್ರವಲ್ಲ, ಕ್ರಿಶ್ಚಿಯನ್​ ಸಂಘಟನೆಗಳು, ಚರ್ಚ್​ಗಳೂ ಲವ್​ ಜಿಹಾದ್​ ಕಾನೂನು ತರಬೇಕು ಎಂದು ಒತ್ತಾಯಿಸುತ್ತಿವೆ. ಹಾಗಾಗಿ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಅದನ್ನು ಸೇರಿಸಲಾಗುವುದು. ಲವ್​ ಜಿಹಾದ್​ನ್ನು ಹೊಡೆದೋಡಿಸಲಾಗುವುದು ಎಂದು ಕೇರಳ ಬಿಜೆಪಿ ಅಧ್ಯಕ್ಷ ಕೆ.ಸುರೇಂದ್ರನ್ ತಿಳಿಸಿದ್ದಾರೆ.

ಕೇರಳದಲ್ಲಿ ಈ ವರ್ಷದ ಏಪ್ರಿಲ್-ಮೇ ತಿಂಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಅದಕ್ಕೆಂದು ಎಲ್ಲ ಪಕ್ಷಗಳು ಈಗಾಗಲೇ ಪ್ರಚಾರವನ್ನು ಆರಂಭಿಸಿವೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries