HEALTH TIPS

ವಿವಾದ ಬಗೆಹರಿಸುವ ಜವಾಬ್ದಾರಿ ಭಾರತದ ಮೇಲಿದೆ: ಕದನ ವಿರಾಮ ಒಪ್ಪಂದ ಬೆನ್ನಲ್ಲೇ ಕಾಶ್ಮೀರ ವಿಚಾರ ಪ್ರಸ್ತಾಪಿಸಿದ ಇಮ್ರಾನ್

          ನವದೆಹಲಿ: ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಕದನ ವಿರಾಮ ನಿಯಮಗಳ ಎಲ್ಲ ಒಪ್ಪಂದಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಭಾರತ ಹಾಗೂ ಪಾಕಿಸ್ತಾನ ಒಪ್ಪಿಗೆ ಸೂಚಿಸಿದ ಬೆನ್ನಲ್ಲೇ ಪಾಕಿಸ್ತಾನದ ಅಧ್ಯಕ್ಷ ಇಮ್ರಾನ್ ಖಾನ್ ಅವರು ಕಾಶ್ಮೀರ ವಿವಾದ ಕುರಿತು ಮಾತನಾಡಿದ್ದಾರೆ.


           ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಇಮ್ರಾನ್ ಖಾನ್ ಅವರು, ಗಡಿಯಲ್ಲಿ ಶಾಂತಿ ಕಾಪಾಡುವ ಸಲುವಾಗಿ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಕದನ ವಿರಾಮ ನಿಯಮಗಳ ಎಲ್ಲ ಒಪ್ಪಂದಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಉಭಯ ರಾಷ್ಟ್ರಗಳು ಒಪ್ಪಿಗೆ ಸೂಚಿಸಿರುವುದನ್ನು ನಾನು ಸ್ವಾಗತಿಸುತ್ತೇನೆ. ಮುಂದಿನ ಪ್ರಗತಿಗೆ ಅನುವು ಮಾಡಿಕೊಡುವ ವಾತಾವರಣ ಸೃಷ್ಟಿಸುವ ಜವಾಬ್ದಾರಿ ಭಾರತದ ಕೈಯಲ್ಲಿದೆ ಎಂದು ಹೇಳಿದ್ದಾರೆ.

          ಇದೇ ವೇಳೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಉಲ್ಲೇಖಿಸಿರುವ ಅವರು, ಕಾಶ್ಮೀರಿ ಜನರ ಸ್ವ–ನಿರ್ಣಯದ ಹಕ್ಕು ಮತ್ತು ದೀರ್ಘಾವಧಿಯ ಬೇಡಿಕೆಯನ್ನು ಈಡೇರಿಸಲು ಭಾರತವು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಟ್ವೀಟ್ ಮಾಡಿದ್ದಾರೆ.
       ವಶಪಡಿಸಿಕೊಂಡ ಭಾರತೀಯ ಪೈಲಟ್ ಅನ್ನು ಮರಳಿ ಕಳುಹಿಸುವ ಮೂಲಕ ಭಾರತೀಯ ಸೇನೆಯ ಅಪಾಯಕಾರಿ ನೀತಿಯ ವಿರುದ್ಧ ನಾವು ಪಾಕಿಸ್ತಾನದ ಜವಾಬ್ದಾರಿಯುತ ನಡವಳಿಕೆಯನ್ನು ಇಡೀ ವಿಶ್ವಕ್ಕೆ ಪಾಕಿಸ್ತಾನ ತೋರಿಸಿದೆ. ಪಾಕಿಸ್ತಾನ ಎಂದಿಗೂ ಶಾಂತಿಯ ಪರವಾಗಿದ್ದು, ಮಾತುಕತೆ ಮೂಲಕ ಸಮಸ್ಯೆಗಳ ಪರಿಹಾರಕ್ಕೆ ಸಿದ್ಧವಿದೆ ಎಂದು ಮತ್ತೊಂದು ಟ್ವೀಟ್‌ನಲ್ಲಿ ಅವರು ಉಲ್ಲೇಖಿಸಿದ್ದಾರೆ.

       ಗಡಿಭಾಗದಲ್ಲಿನ ಉದ್ವಿಗ್ನತೆ ಕಡಿಮೆ ಮಾಡುವ ಮಹತ್ವದ ಕ್ರಮದಲ್ಲಿ ಭಾರತ ಮತ್ತು ಪಾಕಿಸ್ತಾನದ ಸೇನೆಯ ಅಧಿಕಾರಿಗಳು ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಕದನ ವಿರಾಮಕ್ಕೆ ಸಂಬಂಧಿಸಿದ ಎಲ್ಲಾ ಒಪ್ಪಂದಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಒಪ್ಪಿಕೊಂಡಿದ್ದು, ಉಭಯ ರಾಷ್ಟ್ರಗಳ ಈ ನಿರ್ಧಾರವನ್ನು ವಿಶ್ವಸಂಸ್ಥೆ, ಅಮೆರಿಕಾ ಸೇರಿದಂತೆ ಹಲವು ರಾಷ್ಟ್ರಗಳು ಸ್ವಾಗತಿಸಿವೆ.

ADVERTISEMENT
flipboardfacebooktwitterwhatsappNext

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries