ಕಾಸರಗೋಡು: ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನ ಪ್ರಕಾರ ಕಾಸರಗೋಡು ಜಿಲ್ಲೆಗೆ ಮಂಜೂರು ಮಾಡಿರುವ ಪಂಚಾಯತ್ ರಿಸೋರ್ಸ್ ಸೆಂಟರ್ ಮತ್ತು ಡಿ.ಡಿ.ಪಿ. ಕಚೇರಿ ಶನಿವಾರ ಉದ್ಘಾಟನೆಗೊಂಡಿದೆ.
ಸ್ಥಳೀಯಾಡಳಿತ ಸಂಸ್ಥೆಗಳ ಸಚಿವ ಎ.ಸಿ.ಮೊಯ್ದೀನ್ ಮತ್ತು ಕಂದಾಯ ಸಚಿವ ಇ.ಚಂದ್ರಶೇಖರನ್ ಜಂಟಿಯಾಗಿ ಉದ್ಘಾಟಿಸಿದರು. ಸಚಿವ ಇ.ಚಂದ್ರಶೇಖರನ್ ಶಿಲಾಫಲಕ ಅನಾವರಣಗೊಳಿಸಿದರು. ಶಾಸಕ ಎನ್.ಎ.ನೆಲ್ಲಿಕುನ್ನು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್ ಮುಖ್ಯ ಅತಿಥಿಯಾಗಿದ್ದರು. ಚೆಂಗಳ ಗ್ರಾಮ ಪಂಚಾಯತ್ ಅಧ್ಯಕ್ಷ ಖಾದರ್ ಬದ್ರಿಯಾ, ಪಂಚಾಯತ್ ಸಹಾಯಕ ನಿರ್ದೇಶಕ ಎಂ.ಪಿ.ಅಜಿತ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.






