ಕಾಸರಗೋಡು: ಹೆಚ್ಚಳಗೊಳ್ಳುತ್ತಿರುವ ಕೌಟುಂಬಿಕ ಸಮಸ್ಯೆಗಳನ್ನು ನಿಯಂತ್ರಿಸಲು ಜಾಗೃತಾ ಸಮಿತಿಗಳಿಗೆ ಸಾಧ್ಯ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್ ತಿಳಿಸಿದರು.
ವಾರ್ಡ್ ಮಟ್ಟದ ಜಾಗೃತಿ ಸಮಿತಿಗಳನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಚುನಾಯಿತರಾದ ಅಧ್ಯಕ್ಷ, ಉಪಾಧ್ಯಕ್ಷರಿಗಾಗಿ ರಾಜ್ಯ ಮಹಿಳಾ ಆಯೋಗ ಮತ್ತು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜರುಗಿದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಆಯೋಗದ ಸದಸ್ಯೆ ಡಾ.ಶಾಹಿದಾ ಕಮಾಲ್ ಅವರು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್ ಸ್ಥಾಯೀ ಸಮಿತಿ ಅಧ್ಯಕ್ಷೆ ನ್ಯಾಯವಾದಿ ಎಸ್.ಎಮ್.ಸರಿತಾ, ಹೆಚ್ಚುವರಿ ದಮಡನಧಿಕಾರಿ ಅತುಲ್ ಎಸ್.ನಾಥ್, ಮಹಿಳಾ ಸಂರಕ್ಷಣೆ ಅಧಿಕಾರಿ ಎಂ.ವಿ.ಸುನಿತಾ, ಮಹಿಳಾ ಶಿಶು ಅಭಿವೃದ್ಧಿ ಜಿಲ್ಲಾ ಅಧಿಕಾರಿ ಕವಿತಾರಾಣಿ ರಂಜಿತ್ ಉಪಸ್ಥಿತರಿದ್ದರು. ಕಿಲಾ ಸಂಸ್ಥೆಯ ಫ್ಯಾಕ್ವ ಲ್ಟಿ ಎಚ್.ಕೃಷ್ಣ ತರಗತಿ ನಡೆಸಿದರು.





