ಕುಂಬಳೆ: ಬಿಜೆಪಿ ಮಂಜೇಶ್ವರ ಮಂಡಲ ಸಮಿತಿ ವತಿಯಿಂದ ಪಂಡಿತ್ ದೀನ್ ದಯಾಳ್ ಜಿ ಸಂಸ್ಮರಣೆ ಕಾರ್ಯಕ್ರಮ ಜರಗಿತು.
ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಮಣಿಕಂಠ ರೈ ಪಟ್ಲ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ರಾಜ್ಯ ಸಮಿತಿ ಸದಸ್ಯ ಸುರೇಶ್ ಕುಮಾರ್ ಶೆಟ್ಟಿ ಪೂಕಟ್ಟೆ ಪ್ರಧಾನ ಭಾಷಣ ಮಾಡಿದರು. ಸಭೆಯಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಮುರಳೀಧರ ಯಾದವ್ ನಾಯ್ಕಾಪು, ಜಿಲ್ಲಾ ಸಮಿತಿ ಸದಸ್ಯ ವಿನೋದನ್ ಕಡಪ್ಪರ, ಕುಂಬಳೆ ಪಂಚಾಯತಿ ಸಮಿತಿ ಅಧ್ಯಕ್ಷ ಸುಧಾಕರ್ ಕಾಮತ್, ಶಶಿ ಕುಂಬ್ಳೆ, ಸುಜಿತ್ ಕಂಚಿಕಟ್ಟೆ, ಕುಂಬಳೆ ಗ್ರಾಮ ಪಂಚಾಯತಿ ಅರೋಗ್ಯ ಮತ್ತು ವಿದ್ಯಾಭ್ಯಾಸ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರೇಮಾವತಿ, ಸದಸ್ಯೆ ಪುಷ್ಪ, ವಿದ್ಯಾ ಪೈ, ಮೋಹನ್, ಅಜಯ್ ಮೊದಲಾದ ನೇತಾರರು ಭಾಗವಹಿಸಿದರು. ಮಂಡಲ ಕಾರ್ಯದರ್ಶಿ ರಮೇಶ್ ಭಟ್ ಸ್ವಾಗತಿಸಿ, ಜಿತೇಶ್ ವಂದಿಸಿದರು.





