ಮಂಜೇಶ್ವರ: ಮಂಜೇಶ್ವರ ಲೋಕೋಪಯೋಗಿ ಇಲಾಖೆ ಅತಿಥಿಗೃಹ ಇಂದು ಉದ್ಘಾಟನೆಗೊಳ್ಳಲಿದೆ. ಬೆಳಗ್ಗೆ 10 ಕ್ಕೆ ನಡೆಯುವ ಸಮಾರಂಭದಲ್ಲಿ ಲೋಕೋಪಯೋಗಿ ಸಚಿವ ಜಿ.ಸುಧಾಕರನ್ ಉದ್ಘಾಟನೆ ನಡೆಸುವರು. ಶಾಸಕ ಎಂ.ಸಿ.ಕಮರುದ್ದೀನ್ ಅಧ್ಯಕ್ಷತೆ ವಹಿಸುವರು.
ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಮುಖ್ಯ ಅತಿಥಿಯಾಗಿರುವರು. ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್, ಮಂಜೇಶ್ವರ ಬ್ಲಾಕ್ ಪಂಚಾಯತಿ ಅಧ್ಯಕ್ಷೆ ಶಂಸೀನಾ ಟೀಚರ್, ಮಂಜೇಶ್ವರ ಗ್ರಾಮ ಪಂಚಾಯತಿ ಅಧ್ಯಕ್ಷೆ ಜೀನ್ ಲವೀನಾ ಮಂತೇರೋ, ಜಿಲ್ಲಾ ಪಂಚಾಯತಿ ಸದಸ್ಯ ಗೋಲ್ಡನ್ ಅಬ್ದುಲ್ ರಹಮಾನ್, ಮಂಜೇಶ್ವರ ಬ್ಲಾಕ್ ಪಂಚಾಯತಿ ಸದಸ್ಯೆ ಶಂಸೀನಾ ಅಬ್ದುಲ್ಲ ಮೊದಲಾದವರು ಉಪಸ್ಥಿತರಿರುವರು.







