HEALTH TIPS

ಕೋವಿಡ್ ಪ್ರಸರಣ; ನಿರ್ಬಂಧಗಳನ್ನು ಕಠಿಣಗೊಳಿಸಲು ಸರ್ಕಾರದ ಪ್ರಸ್ತಾವನೆ-ಜಿಲ್ಲಾಡಳಿತಕ್ಕೆ ಪವರ್!

                    

         ತಿರುವನಂತಪುರ: ಕೋವಿಡ್ ವ್ಯಾಪಕತೆಯ  ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಿಯಂತ್ರಣಗಳನ್ನು ಬಿಗಿಗೊಳಿಸಲು ಸರ್ಕಾರ ಪ್ರಸ್ತಾಪಿಸಿದೆ. ಸ್ಥಳೀಯ ಪರಿಸ್ಥಿತಿಗಳಿಗೆ ಅನುಗುಣವಾಗಿ ಜಿಲ್ಲಾಡಳಿತಗಳು ನಿರ್ಬಂಧಗಳನ್ನು ವಿಧಿಸಬಹುದು ಎಂದು ಸರ್ಕಾರದ ಪ್ರಸ್ತಾವನೆಯಲ್ಲಿ ಹೇಳಲಾಗಿದೆ.

        ಕಂಟೋನ್ಮೆಂಟ್ ವಲಯದಲ್ಲಿ ಅಗತ್ಯವಿದ್ದರೆ ಜಿಲ್ಲಾ ಆಡಳಿತಗಳು ಕಠಿಣ ನಿರ್ಬಂಧಿತ ಆದೇಶವನ್ನು ನೀಡಬಹುದು. ಅಂತಹ ಕೇಂದ್ರಗಳ ಮೇಲೆ ಕಟ್ಟುನಿಟ್ಟಿನ ನಿಯಂತ್ರಣ ಹೇರಲಾಗುವುದು ಎಂದು ಸರ್ಕಾರ ಹೇಳಿದೆ.

         ಸೂಕ್ಷ್ಮ ವಲಯಗಳ ಮೇಲೆ ನಿರ್ಬಂಧÀಗಳನ್ನು ವಿಧಿಸಬಹುದು. ರಕ್ಷಣಾ ಕಾರ್ಯಾಚರಣೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಸಹಾಯ ಮಾಡಲು ಐಎಎಸ್ ಅಧಿಕಾರಿಗಳನ್ನು ಸಹ ನೇಮಿಸಲಾಗಿದೆ. ರಾಜ್ಯದಲ್ಲಿ ಕೋವಿಡ್ ಹರಡುವಿಕೆಯ ವ್ಯಾಪಕತೆ ಹಿನ್ನೆಲೆಯಲ್ಲಿ ಮತ್ತೆ ಐಎಎಸ್ ಅಧಿಕಾರಿಗಳ ನಿಯೋಜನೆಗೆ ಈ ಆದೇಶ ಹೊರಡಿಸಲಾಗಿದೆ.

         ಏತನ್ಮಧ್ಯೆ, ರಾಜ್ಯದಲ್ಲಿ ನಿನ್ನೆ 5,266 ಮಂದಿ ಜನರಿಗೆ ಕೋವಿಡ್ ಖಚಿತವಾಗಿದೆ. 21 ಮಂದಿ ಮರಣಹೊಂದಿದ್ದಾರೆ. ಕಳೆದ 24 ಗಂಟೆಗಳಲ್ಲಿ 48,118 ಮಾದರಿಗಳನ್ನು ಪರೀಕ್ಷಿಸಲಾಯಿತು. ಪರೀಕ್ಷಾ ಸಕಾರಾತ್ಮಕ ದರವು ಶೇ.10.94 ರಷ್ಟಿತ್ತು. 


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries