HEALTH TIPS

ಪರಿಸರ ಸಂರಕ್ಷಿತ ವಲಯ; ಕೇರಳ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

         ವಯನಾಡ್: ವಯನಾಡ್ ವನ್ಯಜೀವಿ ಅಭಯಾರಣ್ಯದ ಸುತ್ತಲಿನ ಪರಿಸರ ಸಂರಕ್ಷಿತ ಸೂಕ್ಷ್ಮ ವಲಯವನ್ನಾಗಿ ಘೋಷಿಸುವ ವಿಷಯದ ಕುರಿತಾಗಿ ಸಿಪಿಐ(ಎಂ) ನೇತೃತ್ವದ ಕೇರಳದ ಎಲ್‌ಡಿಎಫ್ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದು, ಅಲ್ಲಿನ ಜನರ ಜೀವನೋಪಾಯಕ್ಕೆ ಅಪಾಯವನ್ನುಂಟು ಮಾಡಿದೆ ಎಂದು ಆರೋಪಿಸಿದ್ದಾರೆ.

        ವಯನಾಡ್ ವನ್ಯಜೀವಿ ಅಭಯಾರಣ್ಯದ ಸುತ್ತುಮುತ್ತಲಿನ ಪ್ರದೇಶವನ್ನು ಪರಿಸರ ಸಂರಕ್ಷಿತ ವಲಯವನ್ನಾಗಿ ಘೋಷಿಸಿವುದರಿಂದ ಜನರ ಜೀಪನೋಪಾಯಕ್ಕೆ ಅಪಾಯವನ್ನು ಒಡ್ಡಿದೆ. ಸರ್ಕಾರದ ಕ್ರಮದಿಂದಾಗಿ ಶ್ರಮಜೀವಿಗಳು ಸಂಕಷ್ಟಕ್ಕೆ ಸಿಲುಕಿದ್ದು, ಅವರ ಭವಿಷ್ಯದ ಮೇಲೆ ಪರಿಣಾಮ ಬೀರಿದೆ ಎಂದು ಹೇಳಿದರು.

       ಈ ವಿಷಯದ ಕುರಿತಾಗಿ ತಕ್ಷಣ ಸರ್ಕಾರ ಸರಿಯಾದ ಕ್ರಮ ಕೈಗೊಳ್ಳಬೇಕಿದೆ ಎಂದು ಎರಡು ದಿನಗಳ ಕೇರಳ ಸಂದರ್ಶನದ ವೇಳೆ ವಯನಾಡ್ ಸಂಸದರೂ ಕೂಡಾ ಆಗಿರುವ ರಾಹುಲ್ ಗಾಂಧಿ ಬೇಡಿಕೆಯಿರಿಸಿದರು.

       ರಾಹುಲ್ ಆರೋಪಕ್ಕೆ ತಿರುಗೇಟು ನೀಡಿರುವ ಕೇರಳ ರಾಜ್ಯ ಅರಣ್ಯ ಸಚಿವ ಕೆ. ರಾಜು, ಕೇಂದ್ರ ಪರಿಸರ ಹಾಗೂ ಅರಣ್ಯ ಸಚಿವಾಲಯವು ಪರಿಸರ ಸಂರಕ್ಷಿತ ವಲಯವನ್ನಾಗಿ ಪ್ರಕಟಿಸಿದೆ. ದೆಹಲಿ ಮೂಲದ ರಾಹುಲ್ ಗಾಂಧಿ, ವಯನಾಡ್ ವನ್ಯಜೀವಿ ಅಭಯಾರಣ್ಯದ ಸುತ್ತುಮುತ್ತಲಿನ ಜನನಿಬಿಡ ಪ್ರದೇಶಗಳನ್ನು ಹೊರತುಪಡಿಸಲು ಅರಣ್ಯ ಸಚಿವಾಲಯಕ್ಕೆ ಅಗತ್ಯ ಸಲಹೆಗಳನ್ನು ನೀಡಬೇಕು ಎಂದು ಕೋರಿದ್ದಾರೆ.

       ಪರಿಸರ ಸೂಕ್ಷ್ಮ ವಲಯ ಘೋಷಣೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಈಗಾಗಲೇ ಕೇಂದ್ರ ಅರಣ್ಯ ಸಚಿವರಿಗೆ ಪತ್ರ ಬರೆದಿದ್ದಾರೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಹ ಪ್ರಧಾನಿ ನರೇಂದ್ರ ಮೋದಿ ಮಧ್ಯ ಪ್ರವೇಶಿಸಿ ವಿವಾದ ಇತ್ಯರ್ಥಗೊಳಿಸಲು ಆಗ್ರಹಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries