ಕೊಚ್ಚಿ: ಡಾಲರ್ ಕಳ್ಳಸಾಗಣೆ ಪ್ರಕರಣದಲ್ಲಿ ಸ್ಪೀಕರ್ ಪಿ. ಶ್ರೀರಾಮಕೃಷ್ಣನ್ ಅವರಿಗೆ ಕಸ್ಟಮ್ಸ್ ನೋಟಿಸ್ ಜಾರಿಗೊಳಿಸಿದೆ. ಈ ತಿಂಗಳ 12 ರಂದು ವಿಚಾರಣೆಗೆ ಹಾಜರಾಗುವಂತೆ ಅವರಿಗೆ ನೋಟಿಸ್ ನೀಡಲಾಗಿದೆ. ಕೊಚ್ಚಿಯ ಕಸ್ಟಮ್ಸ್ ಕಚೇರಿಯಲ್ಲಿ ಹಾಜರಾಗುವಂತೆ ತಿಳಿಸಲಾಗಿದೆ.
ಹೈಕೋರ್ಟ್ ನಲ್ಲಿ ಕಸ್ಟಮ್ಸ್ ಹೈಕಮಿಷನರ್ ಸಲ್ಲಿಸಿದ್ದ ಅಫಿಡವಿಟ್‍ನಲ್ಲಿ ಸ್ಪೀಕರ್ ಪಿ ಶ್ರೀರಾಮಕೃಷ್ಣನ್, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಇತರ ಮೂವರು ಸಚಿವರು ಡಾಲರ್ ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದಾರೆ ಎಂದು ದೋಷಾರೋಪಣೆ ಸಲ್ಲಿಸಲಾಗಿದೆ.
ಚಿನ್ನ ಕಳ್ಳಸಾಗಣೆ ಪ್ರಕರಣದ ಆರೋಪಿ ಸ್ವಪ್ನಾ ಸುರೇಶ್ ಅವರ ತಪೆÇ್ಪಪ್ಪಿಗೆಯ ಆಧಾರದ ಮೇಲೆ ಕಸ್ಟಮ್ಸ್ ಈ ಅಫಿಡವಿಟ್ ಸಲ್ಲಿಸಿದೆ. ಈ ಹಿನ್ನೆಲೆಯಲ್ಲಿಯೇ ಕಸ್ಟಮ್ಸ್ ಸ್ಪೀಕರ್‍ಗೆ ನೋಟಿಸ್ ನೀಡಿದೆ.



