HEALTH TIPS

ಮಧ್ಯ ಪ್ರದೇಶದ ಗ್ವಾಲಿಯರ್ ನಲ್ಲಿ ಭೀಕರ ರಸ್ತೆ ಅಪಘಾತ: ಬಸ್-ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿಯಾಗಿ 13 ಮಂದಿ ಸಾವು

       ಗ್ವಾಲಿಯರ್(ಮಧ್ಯ ಪ್ರದೇಶ): ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಆಟೋರಿಕ್ಷಾ ವೇಗವಾಗಿ ಬರುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ 12 ಮಂದಿ ಮಹಿಳೆಯರು ಮತ್ತು ಓರ್ವ ಪುರುಷ ಸೇರಿದಂತೆ 13 ಮಂದಿ ಮೃತಪಟ್ಟ ಘಟನೆ ಮಧ್ಯ ಪ್ರದೇಶದ ಗ್ವಾಲಿಯರ್ ನ ಹಳೆಯ ಪುರಾಣಿ ಚವಾನಿ ಪ್ರದೇಶದಲ್ಲಿ ನಡೆದಿದೆ.


        ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು ಮಹಿಳೆಯರು ಅಂಗನವಾಡಿ ಕೇಂದ್ರದಲ್ಲಿ ಅಡುಗೆ ಮಾಡಿಟ್ಟು ತಮ್ಮ ಮನೆಗೆ ಹಿಂತಿರುಗುತ್ತಿದ್ದರು ಎಂದು ಗ್ವಾಲಿಯರ್ ಎಸ್ ಪಿ ಅಮಿತ್ ಸಂಘಿ ತಿಳಿಸಿದ್ದಾರೆ.

      ಪ್ರಯಾಣಿಕರಲ್ಲಿ 8 ಮಂದಿ ಮಹಿಳೆಯರು ಮತ್ತು ಚಾಲಕ ಸ್ಥಳದಲ್ಲಿಯೇ ಮೃತಪಟ್ಟರೆ ಉಳಿದವರು ಆಸ್ಪತ್ರೆಗೆ ದಾಖಲಿಸಿದ ನಂತರ ಅಸುನೀಗಿದ್ದಾರೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries