HEALTH TIPS

ಕೋವಿಡ್-19 ಹೆಚ್ಚಳ: ಏ.30 ರವರೆಗೆ ಅಂತರರಾಷ್ಟ್ರೀಯ ವಿಮಾನಯಾನ ರದ್ದು

           ನವದೆಹಲಿ: ಕೋವಿಡ್‌ ಹೊಸ ಪ್ರಕಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣದಿಂದಾಗಿ ಅಂತರರಾಷ್ಟ್ರೀಯ ಪ್ರಯಾಣಿಕರ ವಿಮಾನಗಳ ಹಾರಾಟ ರದ್ದು ಆದೇಶವನ್ನು ಏ. 30 ರವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ತಿಳಿಸಿದೆ.


      'ಈಗಾಗಲೇ ಹೊರಡಿಸಿರುವ ಸುತ್ತೋಲೆಯ ಮಾನ್ಯತಾ ಅವಧಿಯನ್ನು ವಿಸ್ತರಿಸಲಾಗಿದ್ದು, ಭಾರತದಿಂದ ಹೊರಡುವ ಮತ್ತು ಭಾರತಕ್ಕೆ ಆಗಮಿಸುವ ಅಂತರರಾಷ್ಟ್ರೀಯ ಪ್ರಯಾಣಿಕರ ವಿಮಾನಸೇವೆಯನ್ನು ಏ.30ರವರೆಗೆ ರದ್ದುಪಡಿಸಲಾಗಿದೆ' ಎಂದು ನಾಗರಿಕ ವಿಮಾನಯಾನ ಪ್ರಧಾನ ನಿರ್ದೇಶನಾಲಯವು (ಡಿಜಿಸಿಎ) ಉಲ್ಲೇಖಿಸಿದೆ.

         'ಈ ನಿರ್ಬಂಧವು ಸರಕು ಸಾಗಣೆ ವಿಮಾನಗಳಿಗೆ ಹಾಗೂ ಡಿಜಿಸಿಎಯಿಂದ ಒಪ್ಪಿಗೆ ಪಡೆದು ಕಾರ್ಯಾಚರಣೆ ನಡೆಸುವ ವಿಮಾನಗಳಿಗೆ ಅನ್ವಯಿಸುವುದಿಲ್ಲ' ಎಂದು ಆದೇಶದಲ್ಲಿ ತಿಳಿಸಲಾಗಿದೆ.

         ಕೋವಿಡ್‌ ಕಾರಣದಿಂದಾಗಿ ಕಳೆದ 2020ರ ಮಾರ್ಚ್‌ 23ರಿಂದ ಅಂತರರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ನಿಷೇಧಿಸಲಾಗಿದೆ. ವಂದೇ ಭಾರತ್‌ ಮಿಷನ್‌ನಡಿ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಭಾರತಕ್ಕೆ ಕರೆತರಲು ಮೇ 7ರಿಂದ ವಿಶೇಷ ವಿಮಾನಗಳನ್ನು ನಿಯೋಜಿಸಲಾಗಿತ್ತು. ಈ ಸೇವೆ ಮುಂದುವರಿದಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries