HEALTH TIPS

ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೋವಿಡ್-19 ಲಸಿಕೆ ಹಾಕಿಸಿಕೊಂಡ ಪ್ರಧಾನಿ: ಕೊರೋನಾ ಮುಕ್ತ ಭಾರತ ನಿರ್ಮಾಣಕ್ಕೆ ಕರೆ

       ನವದೆಹಲಿ: ಇಂದು  ದೇಶಾದ್ಯಂತ ಕೋವಿಡ್-19 ಸಾಂಕ್ರಾಮಿಕ ವಿರುದ್ಧ ಹೋರಾಡಲು ಎರಡನೇ ಸುತ್ತಿನ ಲಸಿಕಾ ಅಭಿಯಾನ ಬೆಳಗ್ಗೆ 9 ಗಂಟೆಗೆ ಆರಂಭವಾಗಿದೆ. 

       ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಬೆಳಗ್ಗೆ ಎರಡನೇ ಸುತ್ತಿನ ಲಸಿಕೆ ಅಭಿಯಾನದಲ್ಲಿ ಕೋವಿಡ್-19 ಲಸಿಕೆಯ ಮೊದಲ ಡೋಸ್ ಹಾಕಿಸಿಕೊಂಡಿದ್ದಾರೆ. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಪುದುಚೆರಿಯ ಸಿಸ್ಟರ್ ಪಿ ನಿವೇದಿತಾ ಅವರು ಭರತ್ ಬಯೋಟೆಕ್ ಕಂಪೆನಿ ಅಭಿವೃದ್ಧಿಪಡಿಸಿರುವ ಕೊವಾಕ್ಸಿನ್ ಲಸಿಕೆಯನ್ನು ಪ್ರಧಾನಿ ಮೋದಿಯವರಿಗೆ ಹಾಕಿದ್ದಾರೆ.

      ಲಸಿಕೆ ಹಾಕಿಸಿಕೊಂಡ ಬಳಿಕ ಟ್ವೀಟ್ ಮಾಡಿರುವ ಪ್ರಧಾನಿ,ಕೋವಿಡ್-19 ವಿರುದ್ಧ ಜಾಗತಿಕ ಮಟ್ಟದಲ್ಲಿ ಹೋರಾಡಲು ಸಮಯಕ್ಕೆ ಸರಿಯಾಗಿ ಕ್ಷಿಪ್ರವಾಗಿ ನಮ್ಮ ವಿಜ್ಞಾನಿಗಳು ಮತ್ತು ವೈದ್ಯರು ಕೆಲಸ ಮಾಡಿದ್ದಾರೆ. ಎರಡನೇ ಸುತ್ತಿನಲ್ಲಿ ಅರ್ಹರೆಲ್ಲರೂ ಲಸಿಕೆ ಹಾಕಿಸಿಕೊಳ್ಳಿ, ನಾವೆಲ್ಲರೂ ಒಟ್ಟು ಸೇರಿ ಕೋವಿಡ್ ಮುಕ್ತ ಭಾರತ ನಿರ್ಮಿಸೋಣ ಎಂದು ಮನವಿ ಮಾಡಿಕೊಂಡಿದ್ದಾರೆ.

     ದೇಶದ ಪ್ರಧಾನ ಸೇವಕ ಎಂದು ಗುರುತಿಸಲ್ಪಟ್ಟಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಏಮ್ಸ್ ನಲ್ಲಿ ಹಾಕಿಸಿಕೊಂಡಿರುವ ಕೊವಾಕ್ಸಿನ್ ವಿಡಿಯೊ ಮತ್ತು ಫೋಟೋ ಸಾಮಾಜಿಕ ಜಾಲತಾಣದಲ್ಲಿ ಬೆಳಗ್ಗೆಯಿಂದಲೇ ಬಹಳ ಹರಿದಾಡುತ್ತಿದೆ. ಭರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ಕೊವಾಕ್ಸಿನ್ ಬಗ್ಗೆ ಅನೇಕ ವದಂತಿಗಳು ಹಬ್ಬಿದ್ದವು. ಹಲವರು ಲಸಿಕೆ ಹಾಕಿಸಿಕೊಳ್ಳಲು ಭಯದಿಂದ ಹಿಂದೇಟು ಹಾಕುತ್ತಿದ್ದರು. ಇದೀಗ ಪ್ರಧಾನ ಮಂತ್ರಿಯವರೇ ಹಾಕಿಸಿದ್ದು ಹಲವರು ಭಯ, ಆತಂಕ ಸಂಶಯವನ್ನು ದೂರ ಮಾಡಿದೆ ಎನ್ನಬಹುದು.


Took my first dose of the COVID-19 vaccine at AIIMS. Remarkable how our doctors and scientists have worked in quick time to strengthen the global fight against COVID-19. I appeal to all those who are eligible to take the vaccine. Together, let us make India COVID-19 free!
Image

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries