HEALTH TIPS

ಕೇಂದ್ರದಿಂದ 2,200 ಕೋಟಿ ರೂ. ಸಂಸದರ ನಿಧಿ ಬಿಡುಗಡೆ

        ನವದೆಹಲಿ: ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ(ಎಂಪಿಎಲ್‌ಎಡಿಎಸ್) ಹಣ ಬಿಡುಗಡೆ ಮಾಡುವಂತೆ ಹಲವು ಸಂಸದರು ಮನವಿ ಮಾಡಿದ ನಂತರ ಕೇಂದ್ರ ಸರ್ಕಾರ ಮಾರ್ಚ್ 31, 2020ರ ವರೆಗೆ ಬಾಕಿ ಇರುವ ಕಂತುಗಳ ಪೈಕಿ 2,200 ಕೋಟಿ ರೂ. ಬಿಡುಗಡೆ ಮಾಡಲು ನಿರ್ಧರಿಸಿದೆ.


         ಕೋವಿಡ್ -19 ಸಾಂಕ್ರಾಮಿಕದ ಪರಿಣಾಮ ಕಳೆದ ಏಪ್ರಿಲ್ ನಲ್ಲಿ ನಡೆದ ಸಂಪುಟ ಸಭೆಯಲ್ಲಿ 2020-21 ಮತ್ತು 2021-22ರವರೆಗೆ ಸಂಸದರ ನಿಧಿಯನ್ನು ಬಿಡುಗಡೆ ಮಾಡದಿರಲು ನಿರ್ಧರಿಸಿತು ಮತ್ತು ಅದರ ಪ್ರಕಾರ 2020-21 ಮತ್ತು 2021-2022ರ ವಾರ್ಷಿಕ ಬಜೆಟ್ ವಿನಿಯೋಗವನ್ನು ಪ್ರತಿಕೂಲ ಆರ್ಥಿಕ ನಿರ್ವಹಣೆಗೆ ಬಳಸಿಕೊಳ್ಳಲು ಹಣಕಾಸು ಸಚಿವಾಲಯಕ್ಕೆ ನಿರ್ದೇಶಿಸಲಾಗಿತ್ತು.

       2019-20ನೇ ಸಾಲಿನ ಲೋಕಸಭಾ ಮತ್ತು ರಾಜ್ಯಸಭೆಯ ಸದಸ್ಯರಿಗೆ ಸಂಬಂಧಿಸಿದಂತೆ ಬಾಕಿ ಇರುವ ಕಂತುಗಳನ್ನು ಬಿಡುಗಡೆ ಮಾಡುವುದು ಮೊದಲ ಆದ್ಯತೆಯಾಗಿದೆ' ಎಂದು ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯ ಹೊರಡಿಸಿದ ಸುತ್ತೋಲೆ ತಿಳಿಸಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries