HEALTH TIPS

ಕಳೆದ ಎರಡು ವರ್ಷಗಳಲ್ಲಿ 2 ಸಾವಿರ ರೂ. ಮುಖಬೆಲೆಯ ನೋಟುಗಳ ಮುದ್ರಣವಾಗಿಲ್ಲ: ಕೇಂದ್ರ ಸರ್ಕಾರ

       ನವದೆಹಲಿ: ಕಳೆದ ಎರಡು ವರ್ಷಗಳಲ್ಲಿ 2 ಸಾವಿರ ಮುಖಬೆಲೆಯ ಕರೆನ್ಸಿ ನೋಟುಗಳು ಮುದ್ರಣವಾಗಿಲ್ಲ ಎಂದು ಕೇಂದ್ರ ಸರ್ಕಾರ ಸೋಮವಾರ ತಿಳಿಸಿದೆ.


       ಲೋಕಸಭೆಯಲ್ಲಿಂದು ಈ ಕುರಿತು ಲಿಖಿತ ಉತ್ತರ ನೀಡಿದ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಸಿಂಗ್ ಠಾಕೂರ್, ಸಾರ್ವಜನಿಕರ ವ್ಯವಹಾರಿಕ ಬೇಡಿಕೆ ಅನುಕೂಲತೆಗಾಗಿ ಆರ್ ಬಿಐನೊಂದಿಗೆ ಸಮಾಲೋಚಿಸಿ ಕಳೆದ ಎರಡು ವರ್ಷಗಳಿಂದ ಈ ನಿರ್ಧಿಷ್ಟ ನೋಟುಗಳ ಮುದ್ರಣ ಮಾಡದಿರುವ ನಿರ್ಧಾರ ಕೈಗೊಳ್ಳಲಾಗಿತ್ತು ಎಂದು ತಿಳಿಸಿದರು. 2019-20 ಮತ್ತು 2020-21ರ ವರ್ಷದಲ್ಲಿ 2 ಸಾವಿರ ರೂ. ನೋಟ್ ಗಳನ್ನು ಮುದ್ರಣ ಮಾಡಿಲ್ಲ ಎಂದು ಅವರು ಮಾಹಿತಿ ನೀಡಿದರು.

      2016-17ರ ಆರ್ಥಿಕ ವರ್ಷದಲ್ಲಿ 3,542,991 ಮಿಲಿಯನ್ 2 ಸಾವಿರ ರೂ. ನೋಟುಗಳನ್ನು ಮುದ್ರಣ ಮಾಡಲಾಗಿತ್ತು ಎಂದು ಆರ್ ಬಿಐ 2019ರಲ್ಲಿ ಹೇಳಿಕೆ ನೀಡಿತ್ತು. ಆದಾಗ್ಯೂ, 2017-18ರಲ್ಲಿ ಕೇವಲ 111.507 ಮಿಲಿಯನ್ ನೋಟುಗಳನ್ನು ಮಾತ್ರ ಮುದ್ರಣ ಮಾಡಲಾಗಿತ್ತು. 2018-19ರಲ್ಲಿ ಇವುಗಳನ್ನು 46,690 ಮಿಲಿಯನ್ ನೋಟುಗಳಿಗೆ ಇಳಿಕೆ ಮಾಡಲಾಯಿತು. ಕಪ್ಪು ಹಣ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ.

      ನಕಲಿ ನೋಟುಗಳು ಮತ್ತು ಕಪ್ಪು ಹಣವನ್ನು ತಡೆಗಟ್ಟುವ ನಿಟ್ಟಿನಲ್ಲಿ 500 ರೂ. ಮತ್ತು 1 ಸಾವಿರ ರೂ. ನೋಟುಗಳನ್ನು ಸರ್ಕಾರ ಅಮಾನ್ಯಗೊಳಿಸಿದ ನಂತರ ನವೆಂಬರ್ 2016ರಂದು 2 ಸಾವಿರ ಮುಖಬೆಲೆಯ ನೋಟುಗಳನ್ನು ಪರಿಚಯಿಸಿತ್ತು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries