HEALTH TIPS

ಭಾರತದಲ್ಲಿ 40,715 ಹೊಸ ಕೋವಿಡ್-19 ಪ್ರಕರಣಗಳು, 199 ಮಂದಿ ಸಾವು

      ನವದೆಹಲಿ: ದೇಶದಲ್ಲಿ ಮತ್ತೆ ಕೊರೋನಾ ಸ್ಫೋಟಗೊಂಡಿದ್ದು, ಕಳೆದ 24 ಗಂಟೆಗಳಲ್ಲಿ 40,715 ಹೊಸ ಪ್ರಕರಣಗಳು ವರದಿಯಾಗಿವೆ. ಕಳೆದ ಒಂದು ದಿನದಲ್ಲಿ 199 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ.


       ಭಾರತದಲ್ಲಿ ಈ ವರೆಗೆ 1,16,86,796 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, ಇವರಲ್ಲಿ 1,11,81,253 ಮಂದಿ ಗುಣಮುಖರಾಗಿದ್ದಾರೆ. ಸದ್ಯ 3,45,377 ಸಕ್ರಿಯ ಪ್ರಕರಣಗಳಿದ್ದು, ಸಾವಿನ ಸಂಖ್ಯೆ 1,60,166ಕ್ಕೆ ತಲುಪಿದೆ.

       ಭಾರತದಲ್ಲಿ ನಿನ್ನೆ ಒಂದೇ ದಿನ 9,67,459 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 23,54,13,233 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

       ಕೊರೋನಾ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 4,84,94,594 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries