HEALTH TIPS

42 ಸಾವಿರ ಶಾಲೆಗಳಲ್ಲಿ ಕುಡಿಯುವ ನೀರಿನ ಸೌಲಭ್ಯವಿಲ್ಲ: ರಮೇಶ್ ಪೋಖ್ರಿಯಾಲ್

             ನವದೆಹಲಿ: ದೇಶದಾದ್ಯಂತ ಸುಮಾರು 42 ಸಾವಿರ ಸರ್ಕಾರಿ ಶಾಲೆಗಳಲ್ಲಿ ಕುಡಿಯುವ ನೀರಿನ ಸೌಲಭ್ಯವಿಲ್ಲ. ಹಾಗೆಯೇ 15 ಸಾವಿರಕ್ಕೂ ಹೆಚ್ಚು ಶಾಲೆಗಳಲ್ಲಿ ಶೌಚಾಲಯ ವ್ಯವಸ್ಥೆಯಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್‌ ಪೋಖ್ರಿಯಾಲ್‌ ನಿಶಾಂಕ್‌ ಮಾಹಿತಿ ನೀಡಿದ್ದಾರೆ.

          ರಾಜ್ಯಸಭೆಯಲ್ಲಿ ಲಿಖಿತ ಉತ್ತರ ನೀಡಿದ ಅವರು, ಶಿಕ್ಷಣಕ್ಕಾಗಿ ಏಕೀಕೃತ ಜಿಲ್ಲಾ ಮಾಹಿತಿ ವ್ಯವಸ್ಥೆ (ಯುಡಿಐಎಸ್‌ಇ) ಅಂಕಿಅಂಶಗಳನ್ನು ಉಲ್ಲೇಖ ಮಾಡಿದ್ದಾರೆ.

         ಯುಡಿಐಎಸ್‌ಇ ಪ್ರಕಾರ, 2018-19ರ ಸಾಲಿನಲ್ಲಿ ದೇಶದ ಒಟ್ಟು 10,83,747 ಸರ್ಕಾರಿ ಶಾಲೆಗಳಲ್ಲಿ 10,41,327 ಶಾಲೆಗಳು ಕುಡಿಯುವ ನೀರು ಸೌಲಭ್ಯ ಹೊಂದಿತ್ತು. ಇದರಲ್ಲಿ 10,68, 726 ಶಾಲೆಗಳಲ್ಲಿ ಶೌಚಾಲಯ ಸೌಕರ್ಯಗಳಿತ್ತು ಎಂದು ಅವರು ತಿಳಿಸಿದ್ದಾರೆ.

      'ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ತಮ್ಮ ವ್ಯಾಪ್ತಿಯ ಖಾಸಗಿ, ಅನುದಾನಿತ ಶಾಲೆಗಳು ಸೇರಿದಂತೆ ಎಲ್ಲಾ ರೀತಿಯ ಶಾಲೆಗಳಲ್ಲಿ ಹೆಣ್ಣುಮಕ್ಕಳು ಹಾಗೂ ಬಾಲಕರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಹಾಗೂ ಮಕ್ಕಳಿಗೆ ಕುಡಿಯುವ ನೀರನ್ನು ಅಗತ್ಯವಾಗಿ ಒದಗಿಸಬೇಕು ಎಂದು ಪದೇ ಪದೇ ಸಲಹೆ ನೀಡಲಾಗಿದೆ' ಎಂದು ಸಚಿವರು ಹೇಳಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries