HEALTH TIPS

45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ, ಕೋ-ವಿನ್ ಪೋರ್ಟಲ್ ನಲ್ಲಿ ಏ.1ರಿಂದ ದಾಖಲಾತಿ; ಭಾರತದಲ್ಲಿ 5 ಕೋಟಿ ದಾಟಿದ ಕೋವಿಡ್ ಲಸಿಕೆ ಅಭಿಯಾನ

           ನವದೆಹಲಿ: 45 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟವರು ಕೋವಿಡ್-19 ಲಸಿಕೆ ಅಭಿಯಾನದಲ್ಲಿ ಸೇರ್ಪಡೆಗೊಳ್ಳುವುದು ಸೇರಿದಂತೆ ಕೋವಿಡ್-19 ಸಾಂಕ್ರಾಮಿಕ ಹರಡುವಿಕೆ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದ್ದು, ಕೋ-ವಿನ್ ಪೋರ್ಟಲ್ ನಲ್ಲಿ ದಾಖಲಾತಿ ಏಪ್ರಿಲ್ 1ರಿಂದ ಆರಂಭವಾಗಲಿದೆ.


           ನಿರ್ದಿಷ್ಟ 20 ರೋಗ ಹರಡುವಿಕೆಯ ಲಕ್ಷಣ ಹೊಂದಿರುವವರನ್ನು ಗುರುತಿಸಿ ಆರೋಗ್ಯ ಸೇವೆ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು, ಹಿರಿಯ ನಾಗರಿಕರು ಸೇರಿದಂತೆ 45ರಿಂದ 59 ವರ್ಷದೊಳಗಿನ ವಯಸ್ಸಿನವರಿಗೆ ಕೋವಿಡ್-19 ಲಸಿಕೆ ನೀಡುವ ಅಭಿಯಾನ ದೇಶಾದ್ಯಂತ ನಡೆಯುತ್ತಿದೆ. ಆದರೆ ಏಪ್ರಿಲ್ 1ರಿಂದ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರು ಲಸಿಕೆ ಅಭಿಯಾನದಲ್ಲಿ ಭಾಗವಹಿಸುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.

            ನಿನ್ನೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, ಕೋವಿಡ್-19 ಲಸಿಕೆ ಅಭಿಯಾನದ ರಾಷ್ಟ್ರೀಯ ತಜ್ಞರ ಗುಂಪು, ಲಭ್ಯವಿರುವ ಎಲ್ಲಾ ವೈಜ್ಞಾನಿಕ ಸಾಕ್ಷಿಗಳ ಆಧಾರದ ಮೇಲೆ ಲಸಿಕೆ ಅಭಿಯಾನಕ್ಕೆ ಎಲ್ಲಾ ವಿಧದಲ್ಲಿ ಮಾರ್ಗಸೂಚಿಗಳನ್ನು ನೀಡುತ್ತಿದೆ ಎಂದಿದ್ದಾರೆ.

           ಏಪ್ರಿಲ್ 1ರಿಂದ ನಿರ್ದಿಷ್ಟ ರೋಗ ಲಕ್ಷಣಗಳನ್ನು ಹೊಂದಿರುವ ವ್ಯಕ್ತಿಗಳು ಪ್ರಮಾಣಪತ್ರಗಳನ್ನು ಹಿಡಿದುಕೊಂಡು ಬರಬೇಕೆಂದಿಲ್ಲ, 45 ವರ್ಷ ಮೇಲ್ಪಟ್ಟವರು ಎಲ್ಲರೂ ಲಸಿಕೆ ಪಡೆಯಬಹುದು ಎಂದಿದ್ದಾರೆ. ಇದಕ್ಕಾಗಿ ಕೋ-ವಿನ್ ಪೋರ್ಟಲ್ ನಲ್ಲಿ ದಾಖಲಾತಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ ಎಂದಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries