HEALTH TIPS

ಭಾರತದಲ್ಲಿ ಕೊರೋನಾ ಸ್ಫೋಟ: ದೇಶದಲ್ಲಿಂದು 62,714 ಹೊಸ ಕೇಸ್ ಪತ್ತೆ, 312 ಮಂದಿ ಸಾವು

      ನವದೆಹಲಿ: ಸತತ 18 ದಿನಗಳಿಂದ ಕೊರೋನಾ ವೈರಸ್ ಪ್ರಕರಗಳ ಏರುಗತಿ ಕಾಣುತ್ತಿರುವ ಭಾರತದಲ್ಲಿ ಭಾನುವಾರ ಹೊಸದಾಗಿ 62,714 ಜನರು ಸೋಂಕಿಗೆ ಒಳಗಾಗಿದ್ದು, ಇದು ಕಳೆದ ವರ್ಷ ಅ.16ರ ನಂತರದ (134 ದಿನಗಳ) ದಾಖಲೆಯಾಗಿದೆ. ಇನ್ನು ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 312 ಮಂದಿ ಸಾವನ್ನಪ್ಪಿದ್ದು, ಇದೂ 3 ತಿಂಗಳ ದಾಖಲೆಯಾಗಿದೆ. 

      ಇದರೊಂದಿಗೆ ದೇಶದಲ್ಲಿ ಸಕ್ರಿಯ ಕೊರೋನಾ ಪ್ರಕರಣಗಳ ಸಂಖ್ಯೆ 4,86,310ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಭಾನುವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯಗೊಂಡ 24 ತಾಸಿನ ಅವಧಿಯಲ್ಲಿ 312 ಸೋಂಕಿತರು ಸಾವನ್ನಪ್ಪಿದ್ದು, ಇದೂ ಕೂಡ 3 ತಿಂಗಳ ದಾಖಲೆಯಾಗಿದೆ. ಸಾವಿನಲ್ಲಿ ಮಹಾರಾಷ್ಟ್ರ ಅಗ್ರಸ್ಥಾನಿಯಾಗಿದ್ದು, 112 ಮಂದಿ ಅಸುನೀಗಿದ್ದಾರೆ. ನಂತರದ ಸ್ಥಾನ ಪಂಜಾಬ್ 59, ಛತ್ತೀಸ್ಗಢ 22, ಕೇರಳ 14 ಹಾಗೂ ಕರ್ನಾಟಕದ್ದಾಗಿದೆ. 

     ಒಂದೇ ದಿನ ಬರೋಬ್ಬರಿ 62,714 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿರುವುದರೊಂದಿಗೆ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,19,71,624ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 1,61,552ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

     1,19,71,624 ಮಂದಿ ಒಟ್ಟಾರೆ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 28,739 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇದರೊಂದಿಗೆ ಚೇತರಿಸಿಕೊಂಡವರ ಸಂಖ್ಯೆ 1,13,23762ಕ್ಕೆ ತಲುಪಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,86,310ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

      ಭಾರತದಲ್ಲಿ ಒಂದೇ ದಿನ 11,81,289 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 24,09,50,842 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

     ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಇದೀಗ ಹಿರಿಯ ನಾಗರೀಕರಿಗೆ ಹಾಗೂ ದೀರ್ಘಕಾಲಿಕ ರೋಗದಿಂದ ಬಳಲುತ್ತಿರುವವರಿಗೂ ಲಸಿಕೆ ನೀಡಲಾಗುತ್ತಿದೆ.         ಇದರಂತೆ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 6,02,69,782 ದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries