ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ ವಿಧಾನಸಭಾ ಚುನಾವಣೆಯನ್ನು ನಡೆಸುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾ ಮಾಡಿದೆ.
ನ್ಯಾಯವಾದಿ ಮನೋಹರ್ ಲಾಲ್ ಶರ್ಮಾ ಅವರು ಸಲ್ಲಿಸಿದ್ದ ಅರ್ಜಿಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ ರಾಮಸುಬ್ರಮಣಿಯನ್ ಅವರ ನ್ಯಾಯಪೀಠ ವಜಾಗೊಳಿಸಿದೆ.
"ನಾವು ನಿಮ್ಮ ಮಾತನು ಒಪ್ಪಲು ಸಾಧ್ಯವಿಲ್ಲ,..ನಾವು ಇಡೀ ಪ್ರಕರಣವನ್ನು ನೋಡಿದ್ದೇವೆ. ಈ ಅರ್ಜಿ ವಜಾಗೊಳಿಸಿದ್ದೇವೆ." ಕೋರ್ಟ್ ಹೇಳಿದೆ.
ಕೇರಳ ಮತ್ತು ತಮಿಳುನಾಡು ಮತ್ತು ಪುದುಚೇರಿಯಲ್ಲಿ ಒಂದೇ ಹಂತದಲ್ಲಿ ಚುನಾವಣೆಗಳು ನಡೆಯಲಿದೆ. ಅಸ್ಸಾಂನಲ್ಲಿ 3 ಹಂತಗಳಲ್ಲಿ ಮತದಾನ ನಡೆಯಲಿದೆ. ಆದರೆ ಪಶ್ಚಿಮ ಬಂಗಾಳದಲ್ಲಿ ಮಾತ್ರ ಎಂಟು ಹಂತದಲ್ಲಿ ಮತದಾನ ನಡೆಯುವುದು ಏಕೆಂದು ಅರ್ಜಿದಾರರು ಪ್ರಶ್ನಿಸಿದ್ದರು.


