ಮಂಜೇಶ್ವರ: ಸುಗುಣ ರಘು ಭಟ್ ನಿರ್ಮಾಣದ ಮಹಾಕವಿ ಮಂಜೇಶ್ವರ ಗೋವಿಂದ ಪೈ ಚಲನಚಿತ್ರದ ಸ್ಕøಪ್ಟ್ ಪೂಜೆ ಇಂದು(ಮಂಗಳವಾರ) ಗೋವಿಂದ ಪೈ ಸ್ಮಾರಕ ಗಿಳಿವಿಂಡು ಆವರಣದಲ್ಲಿ ಬೆಳಿಗ್ಗೆ 10.30ಕ್ಕೆ ನಡೆಯಲಿದೆ.
ಎಡನೀರು ಮಠಾಧೀಶ ಶ್ರೀಸಚ್ಚಿದಾನಂದ ಭಾರತೀ ಶ್ರೀಗಳು ಹಾಗೂ ಮಂಗಳೂರು ಪೋಲೀಸ್ ಕಮಿಷನರ್ ಶಶಿಕುಮಾರ್ ಮುಖ್ಯ ಆಹ್ವಾನಿತರಾಗಿ ಉಪಸ್ಥಿತರಿರುವರು. ಖ್ಯಾತ ಚಲನಚಿತ್ರ ಬರಹಗಾರ ಗಣೇಶ್ ಕಾಸರಗೋಡು ಅವರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿರುವ ಚಲನಚಿತ್ರವನ್ನು ಲಕ್ಷ್ಮೀ ಗಣೇಶ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿ ನಿರ್ಮಿಸಲಾಗುತ್ತಿದೆ.






