ನವದೆಹಲಿ: ವಿಧಾನಸಭಾ ಚುನಾವಣೆ ನಡೆಯಲಿರುವ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶದಲ್ಲಿ ಕೊರೋನಾ ಲಸಿಕೆ ಪ್ರಮಾಣ ಪತ್ರದಿಂದ ಮೋದಿ ಫೋಟೋ ತೆಗೆಯಲು ಆರೋಗ್ಯ ಸಚಿವಾಲಯ ನಿರ್ಧರಿಸಿದೆ.
ಭಾರತೀಯ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ ಮತ್ತು ಪುದುಚೇರಿ ಕೇಂದ್ರಾಡಳಿತ ಪ್ರದೇಶದಲ್ಲಿ ಕೊರೋನಾ ಲಸಿಕೆ ಪ್ರಮಾಣ ಪತ್ರದಿಂದ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋವನ್ನು ಇಂದಿನಿಂದ ತೆಗೆಯಲು ಕೇಂದ್ರ ಆರೋಗ್ಯ ಸಚಿವಾಲಯ ನಿರ್ಧರಿಸಿದೆ.
ಕೊರೋನಾ ಲಸಿಕೆ ಪ್ರಮಾಣ ಪತ್ರದಲ್ಲಿ ಪ್ರಧಾನಿ ಮೋದಿ ಫೋಟೋ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಟಿಎಂಸಿ, ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ ನಂತರ ಕೇಂದ್ರ ಗೃಹ ಸಚಿವಾಲಯ ಈ ಕ್ರಮ ಕೈಗೊಂಡಿದೆ. ಈ ರಾಜ್ಯಗಳ ವಿಧಾನಸಭೆಗಳಿಗೆ ಮಾರ್ಚ್ 27 ರಿಂದ ಏಪ್ರಿಲ್ 29ರವರೆಗೂ ಚುನಾವಣೆ ನಡೆಯಲಿದ್ದು, ಮೇ 2 ರಂದು ಫಲಿತಾಂಶ ಹೊರಬೀಳಲಿದೆ.
ಟಿಎಂಸಿ ದೂರಿನ ಆಧಾರದ ಮೇಲೆ ಚುನಾವಣೆ ನಡೆಯಲಿರುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಕೊರೋನಾ ಲಸಿಕೆ ಪ್ರಮಾಣ ಪತ್ರದಿಂದ ಮೋದಿ ಫೋಟೋ ತೆಗೆಯುವಂತೆ ಚುನಾವಣಾ ಆಯೋಗಕ್ಕೆ ಕೇಂದ್ರ ಸರ್ಕಾರಕ್ಕೆ ಮಾರ್ಚ್ 6ರಂದು ಸೂಚಿಸಿತ್ತು.






