ತಿರುವನಂತಪುರ: ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಮುಲ್ಲಪಳ್ಳಿ ರಾಮಚಂದ್ರನ್ ಅವರು ಮುಂಬರುವ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ.
ರಾಮಚಂದ್ರನ್ ಅವರು 2021ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರುವ ತಮ್ಮ ನಿರ್ಧಾರದ ಬಗ್ಗೆ 40 ಸದಸ್ಯರ ಚುನಾವಣಾ ಸಮಿತಿ ಸಭೆಗೆ ಮಾಹಿತಿ ನೀಡಿದ್ದಾರೆ. ಆದರೆ 76 ವರ್ಷದ ನಾಯಕನ ಉಮೇದುವಾರಿಕೆ ಕುರಿತು ಕಾಂಗ್ರೆಸ್ ಹೈಕಮಾಂಡ್ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ.
ಸಭೆಯಲ್ಲಿ, ಯುಡಿಎಫ್ ಅಧಿಕಾರಕ್ಕೆ ಬರುವಂತೆ ನೋಡಿಕೊಳ್ಳುವುದು ಕೆಪಿಸಿಸಿ ಅಧ್ಯಕ್ಷರಾಗಿ ನನ್ನ ಜವಾಬ್ದಾರಿಯಾಗಿದೆ ಎಂದು ಮುಲ್ಲಪಳ್ಳಿ ತಿಳಿಸಿದ್ದಾರೆ. ಮುಲ್ಲಪಳ್ಳಿ ಅವರನ್ನು 2018 ರ ಸೆಪ್ಟೆಂಬರ್‍ನಲ್ಲಿ ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು.
ಮುಲ್ಲಪಳ್ಳಿಯ ನಿಷ್ಠಾವಂತರು ಮತ್ತು ಕಾಂಗ್ರೆಸ್ ಹೈಕಮಾಂಡ್ ಅವರು ಮಲಬಾರ್‍ನ ಒಂದು ಸ್ಥಾನದಿಂದ ಸ್ಪರ್ಧಿಸಬೇಕೆಂದು ಕೆಪಿಸಿಸಿ ಅಧ್ಯಕ್ಷರ ಮೇಲೆ ತೀವ್ರ ಒತ್ತಡ ಹಾಕುತ್ತಿದೆ ಎನ್ನಲಾಗಿದೆ.






