ಕಾಸರಗೋಡು: ಮತದಾನದ ಹಕ್ಕಿನ ಸದುಪಯೋಗ, ಅದನ್ನು ಪಾಳುಮಾಡಬಾರದು ಎಂಬ ಸಂದೇಶವನ್ನು ಜನತೆಗೆ ತಲಪಿಸುವ ನಿಟ್ಟಿನಲ್ಲಿ ಸ್ವೀಪ್ ಸಿದ್ಧಪಡಿಸಿರುವ ವೀಡಿಯೋದ ಬಿಡುಗಡೆ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಕಿರುಸಭಾಂಗಣದಲ್ಲಿ ಜರುಗಿತು.
ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಬಿಡುಗಡೆಗೊಳಿಸಿದರು. ಸ್ವೀಪ್ ನೋಡೆಲ್ ಅಧಿಕಾರಿ ಕವಿತಾರಾಣಿ ರಂಜಿತ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಮಾಜನೀತಿ ಅಧಿಕಾರಿ ಸಿ.ಕೆ.ಷೀಬಾ ಮುಂತಾಝ್, ಜಿಲ್ಲಾ ಪೆÇ್ರಬೇಷನ್ ಅಧಿಕಾರಿ ಪಿ.ಬಿಜು, ಜಿಲ್ಲಾ ವಾರ್ತಾಧಿಕಾರಿ ಮಧುಸೂದನನ್ ಎಂ., ಕುಟುಂಬಶ್ರೀ ಜಿಲ್ಲಾ ಸಂಚಾಲಕ ಟಿ.ಟಿ.ಸುರೇಂದ್ರನ್ ಮೊದಲಾದವರು ಉಪಸ್ಥಿತರಿದ್ದರು.





