HEALTH TIPS

ರಸ್ತೆ ನಿರ್ಮಾಣ ಹಂತದಲ್ಲೇ ಕೇಬಲ್ ಅಳವಡಿಕೆ‌ ಕಡ್ಡಾಯಗೊಳಿಸಿ: 'ಸುಪ್ರೀಂ'ಗೆ ಅರ್ಜಿ

          ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳು ಹಾಗೂ ಇತರ ರಸ್ತೆಗಳಲ್ಲಿ ಪದೇ ಪದೇ ಅಗೆಯುವುದು ಹಾಗೂ ಆರ್ಥಿಕ ಹೊರೆಯನ್ನು ತಪ್ಪಿಸಲು ರಸ್ತೆ ನಿರ್ಮಾಣ ಹಂತದಲ್ಲಿಯೇ ಎಲ್ಲಾ ರೀತಿಯ ಉಪಯೋಗಕ್ಕೆ ಅನುಕೂಲವಾಗುವಂತೆ ಸಾಮಾನ್ಯ ಕೇಬಲ್‌ವೊಂದನ್ನು ಕಡ್ಡಾಯವಾಗಿ ಆಳವಡಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಬಗ್ಗೆ ಪರಿಶೀಲಿಸಲಾಗುವುದು ಎಂದು ಸುಪ್ರೀಂ ಕೋರ್ಟ್‌ ಬುಧವಾರ ತಿಳಿಸಿದೆ.


        'ಇದು ಉತ್ತಮ ಆಲೋಚನೆ' ಎಂದು ಶ್ಲಾಘಿಸಿರುವ ಮುಖ್ಯನ್ಯಾಯಮೂರ್ತಿ ಎಸ್‌. ಎ. ಬೊಬಡೆ, ನ್ಯಾಯಮೂರ್ತಿಗಳಾದ ಎ.ಎಸ್‌. ಬೋಪಣ್ಣ ಹಾಗೂ ವಿ.ರಾಮಸುಬ್ರಹ್ಮಣಿಯಂ ಅವರನ್ನೊಳಗೊಂಡ ಪೀಠವು, ಕೇಂದ್ರ ಸರ್ಕಾರ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಇತರರಿಗೆ ನೋಟಿಸ್ ಜಾರಿ ಮಾಡಿದೆ.

ಹರಿಪ್ರಿಯಾ ಪಟೇಲ್‌ ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಅರ್ಜಿಯಲ್ಲಿ ಅವರ ಮನೆ ರಾಷ್ಟ್ರೀಯ ಹೆದ್ದಾರಿ 10ರಲ್ಲಿದ್ದು, ಹೆದ್ದಾರಿಗಳಲ್ಲಿ ಪದೇ ಪದೇ ರಸ್ತೆ ರಿಪೇರಿ, ಅಗೆಯುವುದು, ಗುಂಡಿ ತೋಡುವುದರಿಂದ ಅನೇಕ ಅಪಘಾತಗಳು ಸಂಭವಿಸುತ್ತಿರುತ್ತವೆ. ಸಂಚಾರ ಅಸ್ತವ್ಯಸ್ತ ಆಗುತ್ತದೆ. ಸಾರ್ವಜನಿಕ ಹಣವೂ ಪೋಲು ಎಂದು ಹೇಳಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries