ಮಂಜೇಶ್ವರ: ದ.ಕ.ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾಗಿ ಕಾಸರಗೋಡಿನ ಹರೀಶ್ ಸುಲಾಯ ಒಡ್ಡಂಬೆಟ್ಟು ಅವರನ್ನು ಆಯ್ಕೆಮಾಡಲಾಗಿದೆ.
ಮೀಯಪದವು ವಿದ್ಯಾವರ್ಧಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿರುವ ಹರೀಶ್ ಸುಲಾಯ ಅವರು ಹಲವು ವರ್ಷಗಳಿಂದ ಚುಟುಕು ಸಾಹಿತ್ಯ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದು, ನಾಡಿನ ಉದ್ದಗಲ ನಡೆದಿರುವ ವಿವಿಧ ಸಾಹಿತ್ಯ ಚಟುವಟಿಕೆಗಳಲ್ಲಿ ಭಾಗವಹಿಸಿರುತ್ತಾರೆ. ಸಾಹಿತ್ಯ, ಸಾಂಸ್ಕøತಿಕ ಸಂಘಟಕರಾಗಿ ಕ್ರಿಯಾಶೀಲರಾಗಿದ್ದಾರೆ.
ದ.ಕ.ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷ ಇರಾ ನೇಮು ಪೂಜಾರಿ ಅವರು ಮಾ.14 ರಂದು ಮಂಗಳೂರಲ್ಲಿ ನಡೆದ ಕವಿ ಕಾವ್ಯ ಸಮ್ಮೋಹ ಕಾರ್ಯಕ್ರಮದಲ್ಲಿ ಈ ಘೋಷಣೆ ಮಾಡಿದ್ದಾರೆ.






