ಕಾಸರಗೋಡು: ವಿಧಾನಸಭಾ ಕ್ಷೇತ್ರದ ಐಕ್ಯರಂಗದ ಅಭ್ಯರ್ಥಿ, ಮುಸ್ಲಿಂಲೀಗಿನ ಎನ್.ಎ ನೆಲ್ಲಿಕುನ್ನು ಬುಧವಾರ ನಾಮಪತ್ರ ಸಲ್ಲಿಸಿದರು. ಮುಸ್ಲಿಂಲೀಗ್ ಕಚೇರಿಯಿಂದ ವಾಹನಗಳ ಬೆಂಗಾವಲು ಹಾಗೂ ಐಕ್ಯರಂಗ ಮುಖಂಡರನ್ನೊಳಗೊಂಡ ಮೆರವಣಿಗೆಯೊಂದಿಗೆ ಸಾಗಿ ನಾಮಪತ್ರ ಸಲ್ಲಿಸಿದರು.
ಉದುಮ ವಿಧಾನಸಭಾ ಕ್ಷೇತ್ರದ ಎಡರಂಗ ಅಭ್ಯರ್ಥಿ ಸಿ.ಎಚ್. ಕುಞಂಬು, ಕಾಞಂಗಾಡು ವಿಧಾನಸಭಾ ಕ್ಷೇತ್ರದ ಎಡರಂಗ ಅಭ್ಯರ್ಥಿ, ಹಾಲಿ ಸಚಿವ ಇ. ಚಂದ್ರಶೇಖರನ್, ತೃಕ್ಕರಿಪುರ ವಿಧಾನಸಭಾ ಕ್ಷೇತ್ರದ ಎಡರಂಗ ಅಭ್ಯರ್ಥಿ ಎಂ.ರಾಜಗೋಪಾಲನ್ ಮಂಗಳವಾರ ನಾಮಪತ್ರ ಸಲ್ಲಿಸಿದ್ದರು. ಮಂಜೇಶ್ವರ ವಿಧಾನಸಭಾ ಕ್ಷೇತ್ರ ಐಕ್ಯರಂಗ ಅಭ್ಯರ್ಥಿ ಎ.ಕೆ.ಎಂ ಅಶ್ರಫ್ ಮಾ. 18ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಹಾಗೂ ಕಾಸರಗೋಡು ಕ್ಷೇತ್ರದ ಅಭ್ಯರ್ಥಿ ಕೆ. ಶ್ರೀಕಾಂತ್ ಮಾ. 19ರಂದು ನಾಮಪತ್ರ ಸಲ್ಲಿಸಲಿದ್ದಾರೆ.




