HEALTH TIPS

ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾ ನಿಗೂಢ ಸಾವು: ಆತ್ಮಹತ್ಯೆ ಶಂಕೆ?

     ನವದೆಹಲಿ: ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾ ದೆಹಲಿಯ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.



     ದೆಹಲಿಯ ನಾರ್ತ್ ಅವೆನ್ಯೂ ನಲ್ಲಿರುವ ತಮ್ಮ ನಿವಾಸದಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಶರ್ಮಾ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. 

      ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ.  ಈ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಬಿಜೆಪಿ ಸಂಸದೀಯ  ಮಂಡಳಿ ಸಭೆಯನ್ನು ಮುಂದೂಡಲಾಗಿದೆ. 

       1958 ರಲ್ಲಿ ಹಿಮಾಚಲ ಪ್ರದೇಶದ ಮಾಂಡಿಯಲ್ಲಿ ಜನಿಸಿದ್ದ ಶರ್ಮಾ 2014 ರಲ್ಲಿ ಮೊದಲ ಬಾರಿಗೆ ಲೋಕಸಭೆಗೆ ಆಯ್ಕೆಯಾಗಿದ್ದರು.  2019ರಲ್ಲಿ ನಡೆದ ಚುನಾವಣೆಯಲ್ಲಿ ಎರಡನೇ ಬಾರಿಗೆ ಗೆಲುವು ಸಾಧಿಸಿದ್ದರು.  ವಿದೇಶಾಂಗ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯಲ್ಲೂ ಸೇವೆ ಸಲ್ಲಿಸಿದ್ದ ಶರ್ಮಾ. ಅವರು ಪತ್ನಿ ಮತ್ತು ಮೂವರು ಗಂಡು ಮಕ್ಕಳನ್ನು ಅಗಲಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries