ತಿರುವನಂತಪುರ: ಪ್ರತಿಪಕ್ಷ ನಾಯಕ ರಮೇಶ್ ಚೆನ್ನಿತ್ತಲ ಅವರು ನಕಲಿ ಗುರುತುಪತ್ರದ ಬಗ್ಗೆ ಮಾಡಿರುವ ಆರೋಪಗಳ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಟೀಕಾರಂ ಮೀನಾ ಜಿಲ್ಲಾ ಚುನಾವಣಾ ಅಧಿಕಾರಿಗಳಿಂದ ವರದಿ ಕೋರಿದ್ದಾರೆ.
ಆರೋಪ ನಿಜವೆಂದು ಸಾಬೀತಾದರೆ ಕಾನೂನು ಕ್ರಮ ಕೈಗೊಳ್ಳುವಂತೆ ಮುಖ್ಯ ಚುನಾವಣಾ ಅಧಿಕಾರಿ ನಿರ್ದೇಶನ ನೀಡಿದರು. ಒಂದಕ್ಕಿಂತ ಹೆಚ್ಚು ಬಾರಿ ಮತದಾರರ ಪಟ್ಟಿಯಲ್ಲಿ ಹೆಸರುಗಳನ್ನು ಸೇರಿಸಲು ಪ್ರಜ್ಞಾಪೂರ್ವಕ ಪ್ರಯತ್ನ ನಡೆದಿದೆಯೇ ಎಂದು ಪರಿಶೀಲಿಸಲು 20 ದಿನಗಳೊಳಗೆ ವರದಿಯನ್ನು ಸಲ್ಲಿಸುವಂತೆ ಕಾಸರಗೋಡು, ಕೋಝಿಕ್ಕೋಡ್, ಆಲಪ್ಪುಳ, ಕೊಲ್ಲಂ ಮತ್ತು ತಿರುವನಂತಪುರ ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ.





