HEALTH TIPS

ಹೊಸ ಕೃಷಿ ಕಾಯ್ದೆಗಳ ಹಿಂಪಡೆಯುವ ತನಕ ಹೋರಾಟ ನಿಲ್ಲದು: ರಾಕೇಶ್‌ ಟಿಕಾಯತ್‌

            ಮುಜಾಫ್ಫರ್‌ನಗರ : ಕೃಷಿಗೆ ಸಂಬಂಧಿಸಿದ ಮೂರು ಹೊಸ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಹಿಂಪಡೆಯುವ ತನಕ ಪ್ರತಿಭಟನೆ, ಹೋರಾಟ ಮುಂದುವರಿಯುತ್ತದೆ ಎಂದು ಭಾರತೀಯ ಕಿಸಾನ್ ಯೂನಿಯನ್‌ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ.


         ಕೇಂದ್ರ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ 100 ದಿನಗಳು ಪೂರೈಸಿದ ಹಿನ್ನೆಲೆಯಲ್ಲಿ ಅವರು ರಾಮರಾಜ್ ಪಟ್ಟಣದಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿದರು.

ಸರ್ಕಾರ ರೈತರು ಈ ಬೇಡಿಕೆಗಳನ್ನು ಈಡೇರಿಸುವವರೆಗೆ ಆಂದೋಲನೆ ಮುಂದುವರಿಯುತ್ತದೆ ಎಂದು ಅವರು ಪುನರುಚ್ಚರಿಸಿದರು.

      ಟ್ರ್ಯಾಕ್ಟರ್ ರ್‍ಯಾಲಿಗೆ ಚಾಲನೆ ನೀಡಿದ ಅವರು, ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ಎಲ್ಲ ಜಿಲ್ಲೆಗಳಲ್ಲಿ ಸಂಚರಿಸಿ, ಮಾರ್ಚ್ 27 ರಂದು ಗಾಜಿಪುರದ ರೈತರ ಪ್ರತಿಭಟನಾ ಸ್ಥಳವನ್ನು ತಲುಪಲಿದೆ ಎಂದರು.

        ಏತನ್ಮಧ್ಯೆ, ಮುಜಾಫ್ಫರ್‌ನಗರ ಕ್ಷೇತ್ರದ ಸಂಸದರೂ ಆಗಿರುವ ಕೇಂದ್ರ ಸಚಿವ ಸಂಜೀವ್‌ ಬಾಲ್ಯನ್‌ ಅವರು, ಹೊಸ ಮೂರು ಕೃಷಿ ಕಾಯ್ದೆಗಳು ರೈತರಿಗೆ ಪ್ರಯೋಜನಕಾರಿಯಾಗಲಿವೆ. ಒಂದು ವೇಳೆ ಈ ಕಾಯ್ದೆಗಳಿಂದಾಗಿ ಒಬ್ಬ ರೈತ ಜಮೀನು ಕಳೆದುಕೊಂಡರೂ ನಾನು ಸಂಸತ್‌ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ.

       ರೈತರ ಆಶಯಕ್ಕೆ ಅನುಗುಣವಾಗಿಯೇ ಈ ಕಾನೂನುಗಳನ್ನು ಜಾರಿಗೆ ತರಲಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries