HEALTH TIPS

ಚುನಾವಣಾ ಪಶ್ಚಾತ್-ತಾಪ!-ಮಹಿಳೆಯರು ಶಬರಿಮಲೆಗೆ ಪ್ರವೇಶಿಸಬಾರದಿತ್ತು-ಸಚಿವ ಕಡಗಂಪಳ್ಳಿ

                        

         ತಿರುವನಂತಪುರ: ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ದೇವಸ್ವಂ ಸಚಿವ ಕಡಕಂಪಲ್ಲಿ ಸುರೇಂದ್ರನ್ ವಿಷಾದ ವ್ಯಕ್ತಪಡಿಸಿದ್ದಾರೆ. ಶಬರಿಮಲೆಯಲ್ಲಿ ನಡೆದ ಘಟನೆಗಳ ಬಗ್ಗೆ ಈವರೆಗೆ ಯಾವ ಬೇಗುದಿಯನ್ನೂ ತೋರ್ಪಡಿಸದಿದ್ದ ಸಚಿವರು ಇದೀಗ ಚುನಾವಣೆ ಹತ್ತಿರವಾದಂತೆ ವರಸೆ ಬದಲಿಸಿರುವುದು ನಿರೀಕ್ಷಿತವೇ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಭಕ್ತರೊಂದಿಗೆ ಚರ್ಚಿಸಿದ ಬಳಿಕವಷ್ಟೇ ಮುಂದಿನ ಎಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.

         2018 ರಲ್ಲಿ ಶಬರಿಮಲೆಯ ಪ್ರವೇಶವು ಕೇರಳಕ್ಕೆ ಒಂದು ಮುಚ್ಚಿದ ಅಧ್ಯಾಯವಾಗಿದೆ. ಎಲ್ಲರೂ ವಿಷಾದಿಸುತ್ತಾರೆ. ಅದಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆಯೂ ಆತಂಕವಿದೆ ಎಂದು ಸಚಿವರು ಹೇಳಿದರು. "ಆದರೆ ಇಂದು ಅದನ್ನು ಜನರು ಮನಸ್ಸಿನಲ್ಲಿಟ್ಟುಕೊಂಡಿದ್ದಾರೆ ಎಂದು ನಾನು ಭಾವಿಸುವುದಿಲ್ಲ" ಎಂದು ಅವರು ಹೇಳಿದರು.

        ಶಬರಿಮಲೆ ಕುರಿತು ಮುಂದಿನ ನಿರ್ಧಾರಗಳಿಗೆ ಸಂಬಂಧಿಸಿದಂತೆ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದೆ. ಸುಪ್ರೀಂ ಕೋರ್ಟ್‍ನ ತೀರ್ಪು ಏನೇ ಇರಲಿ, ಭಕ್ತರು ಮತ್ತು ರಾಜಕೀಯ ಪಕ್ಷಗಳೊಂದಿಗೆ ಚರ್ಚಿಸಿದ ನಂತರವೇ ನಿರ್ಧಾರ ತೆಗೆದುಕೊಳ್ಳಲಾಗುವುದು. ಪ್ರಕರಣಗಳನ್ನು ಹಿಂಪಡೆಯಲು ಸರ್ಕಾರ ನಿರ್ಧರಿಸಿದೆ ಎಂದು ಅವರು ತಿಳಿಸಿರುವರು.

         ರಾಜ್ಯದಲ್ಲಿ ಚುನಾವಣೆಗೆ ದಿನಗಣನೆ ಆರಂಭಗೊಳ್ಳುತ್ತಿರುವಂತೆ ಸಚಿವರು ಹತಾಶರಾಗಲು ಪ್ರಾರಂಭಿಸುತ್ತಿದ್ದಾರೆ. ಸಿಪಿಎಂ ಅಭ್ಯರ್ಥಿಯ ಘೋಷಣೆಯ ಬಳಿಕ, ಅಭ್ಯರ್ಥಿಯೂ ಆಗಿರುವ ಕಡಕಂಪಲ್ಲಿ, ಶಬರಿಮಲೆ ವಿಷಯದಲ್ಲಿ ಸರ್ಕಾರದ ನಿಲುವುಗಳು ತಪ್ಪು ಎಂದು ಒಪ್ಪಿಕೊಂಡರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಶಬರಿಮಲೆ ವಿಷಯವು ಸಿಪಿಎಂಗೆ ದೊಡ್ಡ ಹಿನ್ನಡೆಯಾಗಿತ್ತು. ವಿಧಾನಸಭಾ ಚುನಾವಣೆಯ ಮೇಲೂ ಪರಿಣಾಮ ಬೀರುತ್ತದೆ ಎಂದು ಸ್ಪಷ್ಟವಾದ ಹಿನ್ನೆಲೆಯಲ್ಲಿ  ಶಬರಿಮಲೆ ಸಮಸ್ಯೆಗೆ ಸಂಬಂಧಿಸಿದ ಪ್ರಕರಣಗಳನ್ನು ಹಿಂಪಡೆಯಲು ಸರ್ಕಾರ ನಿರ್ಧರಿಸಿದೆ. ಸುಪ್ರೀಂ ಕೋರ್ಟ್ ಪೀಠದ ತೀರ್ಪು ಏನೇ ಇರಲಿ, ಭಕ್ತರೊಂದಿಗೆ ಚರ್ಚಿಸಿದ ನಂತರವೇ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದು ಎಡ ಸರ್ಕಾರ ನಿಲುವು ಎಂದು ಕಡಗಂಪಳ್ಳಿ ಹೇಳಿದರು. 


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries