ನವದೆಹಲಿ: ಅಸ್ಟ್ರಾಜೆನೆಕಾ ಕೊರೊನಾ ಲಸಿಕೆ ಹಾಕಿಸಿಕೊಳ್ಳುವುದು ಸುರಕ್ಷಿತ, ಇದರಿಂದ ಯಾವುದೇ ತೊಂದರೆ ಇಲ್ಲ ಅನಗತ್ಯ ಭಯ, ಆತಂಕ ಬೇಡ ಎಂದು ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.
ಅಸ್ಟ್ರಾಜೆನೆಕಾ ಕೊರೊನಾ ವ್ಯಾಕ್ಸಿನ್ ತೆಗೆದುಕೊಂಡ ಹಲವರಲ್ಲಿ ರಕ್ತ ಹೆಪ್ಪುಗಟ್ಟುವ ಅಡ್ಡಪರಿಣಾಮ ಕಂಡು ಬಂದ ಹಿನ್ನೆಲೆ ಹಲವು ದೇಶಗಳಲ್ಲಿ ಅಸ್ಟ್ರಾಜೆನೆಕಾ ಕೊರೊನಾ ವ್ಯಾಕ್ಸಿನ್ ಬಳಕೆ ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಈ ಹಿನ್ನೆಲೆ ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.
ಈ ಸಂಬಂಧ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ನೀತಿ ಆಯೋಗದ ಸದಸ್ಯ ವಿಕೆ ಪೌಲ್ , ಭಾರತದ ತಂಡ ವ್ಯಾಕ್ಸಿನ್ ಅಡ್ಡಪರಿಣಾಮಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದೆ, ಇದುವರೆಗೆ ಅಂತಹ ವರದಿಗಳು ಕಂಡು ಬಂದಿಲ್ಲ, ಆತಂಕ ಪಡುವ ಅಗತ್ಯವಿಲ್ಲ ಎಂದು ಅವರು ಹೇಳಿದರು.






