HEALTH TIPS

ಕೋವಿಡ್‌: ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆ ರದ್ದು

          ನವದೆಹಲಿ: ಸಿಬಿಎಸ್‌ಇ 10ನೇ ತರಗತಿ ಬೋರ್ಡ್‌ ಪರೀಕ್ಷೆಗಳನ್ನು ರದ್ದು ಪಡಿಸಲು ಹಾಗೂ 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲು ಬುಧವಾರ ಉನ್ನತ ಮಟ್ಟದ ಸಭೆಯಲ್ಲಿ ನಿರ್ಧರಿಸಲಾಗಿದೆ.


         ಸಿಬಿಎಸ್‌ಇ ಮಂಡಳಿಯು ರೂಪಿಸುವ ಕ್ರಮಗಳ (ವಸ್ತುನಿಷ್ಠ ಮಾನದಂಡ) ಆಧಾರ ಮೇಲೆ ಹತ್ತನೇ ತರಗತಿಯ ಫಲಿತಾಂಶವನ್ನು ಸಿದ್ಧಪಡಿಸಲಾಗುತ್ತದೆ. 12ನೇ ತರಗತಿ ಪರೀಕ್ಷೆಗಳನ್ನು ನಂತರ ನಡೆಸಲಾಗುತ್ತದೆ ಹಾಗೂ ಜೂನ್‌ 1ರಂದು ಮಂಡಳಿಯು ಪರಿಸ್ಥಿತಿ ಅವಲೋಕಿಸಲಿದೆ ಎಂದು ಶಿಕ್ಷಣ ಸಚಿವಾಲಯ ತಿಳಿಸಿದೆ.

         ಇಂಟನಲ್‌ ಅಸೆಸ್ಮೆಂಟ್‌ (ಆಂತರಿಕ ಮೌಲ್ಯಮಾಪನ) ಆಧಾರದ ಮೇಲೆ 10ನೇ ತರಗತಿ ವಿದ್ಯಾರ್ಥಿಗಳ ಫಲಿತಾಂಶ ನೀಡಲಾಗುತ್ತದೆ. ವಿದ್ಯಾರ್ಥಿಗೆ ಅದು ತೃಪಿದಾಯಕವೆಂದು ತೋರದಿದ್ದರೆ ಪರೀಕ್ಷೆಗೆ ಹಾಜರಾಗಬಹುದು. ಕೋವಿಡ್‌ ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ನಂತರದಲ್ಲಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್‌ ನಿಶಾಂಕ್‌ ಹೇಳಿದ್ದಾರೆ.

ಪರೀಕ್ಷೆ ನಡೆಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಸಭೆ ನಡೆಸಲಾಯಿತು. ಕೇಂದ್ರ ಶಿಕ್ಷಣ ಸಚಿವ ಮತ್ತು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಈ ಹಿಂದೆ ಮೇ 4ರಿಂದ 10 ಮತ್ತು 12ನೇ ತರಗತಿಯ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಲಾಗಿತ್ತು.


                 ಸಿಬಿಎಸ್‌ಇ ಅಧಿಸೂಚನೆ

       ದೇಶದಾದ್ಯಂತ ಕೋವಿಡ್‌-19 ಪ್ರಕರಣಗಳು ಹೆಚ್ಚುತ್ತಿರುವುದರಿಂದ ಪರೀಕ್ಷೆಗಳನ್ನು ರದ್ದುಪಡಿಸಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌, ಪಂಜಾಬ್‌ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರಿಂದರ್ ಸಿಂಗ್‌ ಸೇರಿದಂತೆ ಹಲವು ನಾಯಕರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದರು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries