HEALTH TIPS

ಕೊರೊನಾ ವ್ಯಾಪಕತೆ: ಕಾಸರಗೋಡು ಜಿಲ್ಲೆಯ 15 ಸ್ಥಳೀಯಾಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ 7 ದಿನಗಳ ಕಾಲ ನಿಷೇಧಾಜ್ಞೆ

                              

              ಕಾಸರಗೋಡು: ಕಾಸರಗೋಡು ಜಿಲ್ಲೆಯ 15 ಸ್ಥಳೀಯಾಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ 7 ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. 

                    ಜಿಲ್ಲೆಯಲ್ಲಿ ಕೊರೋನಾ ಹಾವಳಿ ಅಧಿಕಗೊಂಡಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ಕೋವಿಡ್ ರೋಗಿಗಳಿರುವ 15 ಸ್ಥಳೀಯಾಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಾಗಿದೆ. ಸಿ.ಆರ್.ಪಿ.ಸಿ. 144 ಪ್ರಕಾರ ಏ.23ರ ರಾತ್ರಿ 12 ಗಂಟೆಯಿಂದ 7 ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಿರುವುದಾಗಿ ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಆದೇಶ ನೀಡಿದ್ದಾರೆ. 

               ಈಗಾಗಲೇ ರಾಜ್ಯ ಸರಕಾರ ಪ್ರಕಟಿಸಿರುವ ಎಲ್ಲ ಕಟ್ಟುನಿಟ್ಟುಗಳನ್ನೂ ಈ ಆದೇಶದ ಜತೆಗೆ ಕಡ್ಡಾಯವಾಗಿ ಜಾರಿಗೊಳಿಸುವುದಾಗಿ ತಿಳಿಸಲಾಗಿದೆ. 

                 ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಸೇರಿದ ಜಿಲ್ಲಾ ಪಿಡುಗು ನಿವಾರಣೆ ಪ್ರಧಿಕಾರದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. 

                ಕಾಞಂಗಾಡು, ನೀಲೇಶ್ವರ ನಗರಸಭೆ ವ್ಯಾಪ್ತಿಗಳಲ್ಲಿ, ಗ್ರಾಮ ಪಂಚಾಯತ್ ಗಳಾದ ಚೆಮ್ನಾಡು, ಪಳ್ಳಿಕ್ಕರೆ, ಉದುಮಾ, ಅಜಾನೂರು, ಚೆರುವತ್ತೂರು, ಕಳ್ಳಾರ್, ಕಯ್ಯೂರು-ಚೀಮೇನಿ, ಕಿನಾನೂರು-ಕರಿಂದಳಂ, ಕೋಡೋಂ-ಬೇಳೂರು, ಮಡಿಕೈ, ಪಡನ್ನ, ಪುಲ್ಲೂರು-ಪೆರಿಯ, ತ್ರಿಕರಿಪುರ ಗಳಲ್ಲಿ ಈ ನಿಷೇಧಾಜ್ಞೆ ಇರುವುದು. ಜನಗುಂಪು ಸೇರವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಈ ಪ್ರದೇಶಗಳಲ್ಲಿ ಪೋಲೀಸ್ ತಪಾಸಣೆ ಸಹಿತ ಬಿಗಿ ನಿಯಂತ್ರಣ ಏರ್ಪಡಿಸಲಾಗಿದೆ.

             ಸಭೆಯಲ್ಲಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಪಿ.ಬಿ.ರಾಜೀವ್, ಹೆಚ್ಚುವರಿ ದಂಡನಾಧಿಕಾರಿ ಅತುಲ್ ಎಸ್.ನಾಥ್, ಜಿಲ್ಲಾ ವೈದ್ಯಾಧಿಕಾರಿ(ಆರೋಗ್ಯ) ಡಾ.ಎ.ವಿ.ರಾಮದಾಸ್ ಮೊದಲಾದವರು ಭಾಗವಹಿಸಿದ್ದರು. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries