HEALTH TIPS

ಅಮಮ! ಸಾರ್ವಕಾಲಿಕ ದಾಖಲೆ ಬರೆದ ಕೊರೋನಾ ವೈರಸ್; ಒಂದೇ ದಿನ 2.61ಲಕ್ಷ ಮಂದಿಗೆ ಸೋಂಕು, 1,501 ಸಾವು!

      ನವದೆಹಲಿ: ದೇಶದ ಸಾಂಕ್ರಾಮಿಕ ಇತಿಹಾಸದಲ್ಲೇ ಕೋವಿಡ್-19 ಸೋಂಕು ದಾಖಲೆ ಬರೆದಿದ್ದು, ಒಂದೇ ದಿನ ಬರೊಬ್ಬರಿ 2.61ಲಕ್ಷ ಮಂದಿಗೆ ಸೋಂಕು ಒಕ್ಕರಿಸಿದ್ದು, ಅಂತೆಯೇ 1,501 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

      ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 2,61,500 ಸೋಂಕು ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 1,47,88,109ಕ್ಕೆ ಏರಿಕೆಯಾಗಿದೆ. ಅಂತೆಯೇ ನಿನ್ನೆ 1,501 ಸೋಂಕಿತರು ಸಾವನ್ನಪ್ಪಿದ್ದು ಆ ಮೂಲಕ  ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆ 1,77,150ಕ್ಕೆ ಏರಿಕೆಯಾಗಿದೆ. 

       ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 1,38,423 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಒಟ್ಟಾರೆ ಗುಣಮುಖರ ಸಂಖ್ಯೆ 1,28,09,643ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 18,01,316 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

     ಕಳೆದ 24 ಗಂಟೆಗಳ ಅವಧಿಯಲ್ಲಿ 15,66,394 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಆ ಮೂಲಕ ಒಟ್ಟಾರೆ ಕೋವಿಡ್ ಪರೀಕ್ಷೆಗಳ ಸಂಖ್ಯೆ 26,65,38,416ಕ್ಕೆ ಏರಿಕೆಯಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಅಂತೆಯೇ ಈ ವರೆಗೂ 12,26,22,590 ಡೋಸ್ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ  ಎಂದು ತಿಳಿದುಬಂದಿದೆ. 

    ನಿನ್ನೆಯಷ್ಟೇ ದೇಶಾದ್ಯಂತ 2,34,692 ಕೇಸ್ ಗಳು ಪತ್ತೆಯಾಗಿತ್ತು. ಇದು ಈ ವರೆಗಿನ ಸಾರ್ವಕಾಲಿಕ ದಾಖಲೆಯಾಗಿತ್ತು. ಆದರೆ ಇಂದು ಈ ದಾಖಲೆಯನ್ನೂ ಮೀರಿಸುವಂತೆ 2.61ಲಕ್ಷ ಮಂದಿಗೆ ಸೋಂಕು ಒಕ್ಕರಿಸಿದೆ. ಆ ಮೂಲಕ ಸತತ 4ನೇ ದಿನವೂ 2 ಲಕ್ಷಕ್ಕಿಂತಲೂ ಹೆಚ್ಚು ಹೊಸ ಪ್ರಕರಣಗಳು ಪತ್ತೆಯಾಗಿವೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries