HEALTH TIPS

ಮತ ಎಣಿಕೆ ಕೇಂದ್ರಗಳ ಸಿಬ್ಬಂದಿ ಮತ್ತು ಏಜೆಂಟರಿಗೆ ಏ.29ರಂದು ಆರ್.ಟಿ.ಪಿ.ಸಿ.ಆರ್.ತಪಾಸಣೆ

          ಕಾಸರಗೋಡು : ವಿಧಾನಸಭೆ ಚುನಾವಣೆಯ ಮತ ಎಣಿಕೆ ಕರ್ತವ್ಯಕ್ಕೆ ನೇಮಕಗೊಂಡಿರುವ ಎರಡು ಡೋಸ್ ವಾಕ್ಸಿನೇಷನ್ ಪಡೆಯದೇ ಇರುವ ಸಿಬ್ಬಂದಿ ಮತ್ತು ಏಜೆಂಟರು ಕರ್ತವ್ಯ ನಿರ್ವಹಣೆಯ ಹಿನ್ನೆಲೆಯ 72 ತಾಸುಗಳ ಮುನ್ನ ಆರ್.ಟಿ.ಪಿ.ಸಿ.ಆರ್. ತಪಾಸಣೆಗೆ ಒಳಗಾಗಬೇಕು ಎಂದು ಆದೇಶ ಪ್ರಕಟಗೊಂಡಿರುವ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯ 5 ವಿಧಾನಸಭೆ ಕ್ಷೇತ್ರ ಮಟ್ಟದಲ್ಲಿ ಏ.29ರಂದು ಆರ್.ಟಿ.ಪಿ.ಸಿ.ಆರ್. ತಪಾಸಣೆ ನಡೆಯಲಿದೆ. 

               ಮಂಜೇಶ್ವರ ವಿಧಾನಸಭೆ ಕ್ಷೇತ್ರದಲ್ಲಿ ಅಂದು ಬೆಳಗ್ಗೆ 10 ಗಂಟೆಗೆ ಮಂಗಲ್ಪಾಡಿ ತಾಲೂಕು ಆಸ್ಪತ್ರೆಯಲ್ಲಿ, ಕಾಸರಗೋಡು ವಿಧಾನಸಭೆ ಕ್ಷೇತ್ರದಲ್ಲಿ ಅಂದು ಮಧ್ಯಾಹ್ನ 2 ಗಂಟೆಗೆ ಜನರಲ್ ಆಸ್ಪತ್ರೆಯಲ್ಲಿ, ಕಾಞಂಗಾಡು ವಿಧಾನಸಭೆ ಕ್ಷೇತ್ರದಲ್ಲಿ ಅಂದು ಬೆಳಗ್ಗೆ 10.30ಕ್ಕೆ ಮುನಿಸಿಪಲ್ ಟೌನ್ ಹಾಲ್, ತ್ರಿಕರಿಪುರ ವಿಧಾನಸಭೆ ಕ್ಷೇತ್ರದಲ್ಲಿ ಅಂದು ಬೆಳಗ್ಗೆ 10 ಗಂಟೆಗೆ ನೀಲೇಶ್ವರ ವ್ಯಾಪಾರ ಭವನದಲ್ಲಿ ಆರ್.ಟಿ.ಪಿ.ಸಿ.ಆರ್. ತಪಾಸಣೆ ನಡೆಯಲಿದೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries