ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಪಶ್ಚಿಮ ಬಂಗಾಳದಲ್ಲಿ ನಿಗದಿಯಾಗಿದ್ದ ತಮ್ಮ ಚುನಾವಣಾ ರ್ಯಾಲಿಯನ್ನು ರದ್ದುಗೊಳಿಸಿದ್ದು, ನಾಳೆ ಕೋವಿಡ್-19 ಪರಿಸ್ಥಿತಿ ಪರಿಶೀಲಿಸಲು ಉನ್ನತ ಮಟ್ಟದ ಸಭೆ ಕರೆದಿದ್ದಾರೆ.
"ನಾಳೆ ಕೋವಿಡ್ -19 ಪರಿಸ್ಥಿತಿಯನ್ನು ಪರಿಶೀಲಿಸಲು ಉನ್ನತ ಮಟ್ಟದ ಸಭೆಗಳ ಅಧ್ಯಕ್ಷತೆ ವಹಿಸಲಾಗುವುದು. ಅದ್ದರಿಂದ ನಾನು ಪಶ್ಚಿಮ ಬಂಗಾಳಕ್ಕೆ ಹೋಗುವುದಿಲ್ಲ" ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಇದರ ನಂತರ, ಪಶ್ಚಿಮ ಬಂಗಾಳದಲ್ಲಿ ಪ್ರಧಾನಿಯ ಯಾವುದೇ ರಾಜಕೀಯ ಸಭೆ ನಿಗದಿಪಡಿಸಲಾಗಿಲ್ಲ, ಹೀಗಾಗಿ ಪಶ್ಚಿಮ ಬಂಗಾಳದಲ್ಲಿ ಅವರ ಚುನಾವಣಾ ಪ್ರಚಾರ ಇಂದಿಗೆ ಕೊನೆಗೊಳಿಸಲಾಗಿದೆ.
Tomorrow, will be chairing high-level meetings to review the prevailing COVID-19 situation. Due to that, I would not be going to West Bengal.





