HEALTH TIPS

ದೆಹಲಿಯಲ್ಲಿ ಇನ್ನು ಲೆಫ್ಟಿನೆಂಟ್‌ ಗವರ್ನರ್‌ 'ಸರ್ಕಾರ'

          ನವದೆಹಲಿ: ರಾಷ್ಟ್ರೀಯ ರಾಜಧಾನಿ ದೆಹಲಿ (ತಿದ್ದುಪಡಿ) ಕಾಯ್ದೆ-2021 ಏ. 27ರಿಂದ ಜಾರಿಗೆ ಬಂದಿದೆ. ಈ ಕುರಿತು ಕೇಂದ್ರ ಗೃಹ ಸಚಿವಾಲಯ ಅಧಿಸೂಚನೆ ಪ್ರಕಟಿಸಿದೆ.

      ಚುನಾಯಿತ ಸರ್ಕಾರಕ್ಕಿಂತ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವ ಲೆಫ್ಟಿನೆಂಟ್‌ ಗವರ್ನರ್‌ಗೆ ಈ ಕಾಯ್ದೆ ಹೆಚ್ಚಿನ ಅಧಿಕಾರ ನೀಡುತ್ತದೆ.

      ಈ ಕಾಯ್ದೆ ಪ್ರಕಾರ, ದೆಹಲಿಯಲ್ಲಿ 'ಸರ್ಕಾರ' ಎಂದರೆ 'ಲೆಫ್ಟಿನೆಂಟ್‌ ಗವರ್ನರ್‌'. ಇನ್ನು, ನಗರಕ್ಕೆ ಸಂಬಂಧಿಸಿ ಯಾವುದೇ ನಿರ್ಧಾರ ಕೈಗೊಳ್ಳಬೇಕಾದರೆ, ಅನುಷ್ಠಾನಕ್ಕಾಗಿ ಅಲ್ಲಿನ ಸರ್ಕಾರ ಲೆಫ್ಟಿನೆಂಟ್‌ ಗವರ್ನರ್‌ ಅವರ ಅಭಿಪ್ರಾಯದಂತೆ ನಡೆಯಬೇಕಾಗುತ್ತದೆ.

        ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆ ಈ ಮಸೂದೆಯನ್ನು ಮಾರ್ಚ್‌ 22ರಂದು ಲೋಕಸಭೆಯಲ್ಲಿ ಅಂಗೀಕರಿಸಲಾಯಿತು. ನಂತರ, ರಾಜ್ಯಸಭೆಯಲ್ಲಿ ಮಾರ್ಚ್‌ 24ರಂದು ಅಂಗೀಕರಿಸಲಾಯಿತು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries